ಶಿವಮೊಗ್ಗ: ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್ಸಿ ಅಥವಾ ಯಾವುದೇ ಆಸ್ಪತ್ರೆಗೆ ತೆರಳಿ ಶೀಘ್ರ ಚಿಕಿತ್ಸೆ ಪಡೆಯಬೇಕು. ನಾಟಿ ವೈದ್ಯರ ಬಳಿ ತೆರಳಿ ಜೀವಕ್ಕೆ ಆಪತ್ತು ತಂದುಕೊಳ್ಳಬಾರದು. ಹಾವು ಕಡಿತಕ್ಕೆ ನಾಟಿ ಔಷಧಿ ನೀಡುವ ನಾಟಿ ವೈದ್ಯರ ವಿರುದ್ದ ಸೂಕ್ತ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.
ಡಿಎಸ್ಓ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 226 ಹಾವು ಕಡಿತದ ಪ್ರಕರಣಗಳಿದ್ದು 3 ಸಾವು ಸಂಭವಿಸಿದೆ. ಸಾಗರ ಮತ್ತು ಶಿಕಾರಿಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ ಎಂದರು.
-
ಇದನ್ನೂ ಓದಿ > ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಹೆಚ್ಚಾಯ್ತು ಆತಂಕ!
-
ಇದನ್ನೂ ಓದಿ > ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಏನು?
ಹಾವು ಕಡಿತ ಆಡಿಟ್ ನಡೆಸಿದ ಎಡಿಸಿ, ಹಾವು ಕಡಿತ ಉಂಟಾದ ತಕ್ಷಣದಲ್ಲೇ ಆಸ್ಪತ್ರೆಗೆ ಕರೆತರಬೇಕು. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ನೀಡುವ ಅಗತ್ಯ ಔಷಧಿ ಲಭ್ಯ ಇಟ್ಟುಕೊಳ್ಳಬೇಕು. ಹಾಗೂ ಮುನ್ನೆಚ್ಚರಿಕೆ ಹಾಗೂ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಮನೆ ಸುತ್ತಮುತ್ತ ಸ್ವಚ್ಚತೆ ಕಾಪಾಡಕೊಳ್ಳಬೇಕು. ಹಾಗೂ ಶಾಲಾ ಆವರಣದಲ್ಲಿ ಅನಗತ್ಯ ಗಿಡ ಗಂಟೆಗಳನ್ನು ಸ್ವಚ್ಚಗೊಳಿಸಬೇಕು ಎಂದು ಸೂಚನೆ ನೀಡಿದರು. ಹಾಗೂ ಹಾವು ಕಡಿತಕ್ಕೆ ಯಾವುದೇ ಕಾರಣಕ್ಕೆ ನಾಟಿ ವೈದ್ಯರ ಬಳಿ ತೆರಳದೇ ತತ್ಕ್ಷಣ ಆಸ್ಪತ್ರೆಗೆ ರೋಗಿಯನ್ನು ಕರೆತರಬೇಕು. ಹಾವು ಕಡಿತಕ್ಕೆ ನಾಟಿ ಔಷಧಿ ನೀಡುವ ವೈದ್ಯರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆರ್ಸಿಹೆಚ್ ಅಧಿಕಾರಿಗಳಿಗೆ ಸೂಚಿಸಿದರು.















