ಶಿವಮೊಗ್ಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನ ಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆ ಆರ್ ಎಫ್) ಅರ್ಹತಾ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಏ. 24 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0821-2515944 ನ್ನು ಸಂಪರ್ಕಿಸಬಹುದು .















