ಭದ್ರಾವತಿ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡತ್ತಿದ್ದ ಆರೋಪದ ಮೇರೆಗೆ, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಲವ (24), ಲೇಖಕ್ (20), ಮನೋಜ (27), ಕಿರಣ್ (24) ಹಾಗೂ ಗಿರೀಶ್ (28) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 2.34 ಲಕ್ಷ ರೂ. ಮೌಲ್ಯದ 4 ಕೆಜಿ 690 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ
ಆರೋಪಿಗಳು ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗದೆಡೆಗೆ ತೆರಳುವ ರಾಷ್ಟ್ರೀಯ ಹೆದ್ದಾರಿ 369 ರ ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ವರ್ತಮಾನದ ಮೇರೆಗೆ ಇನ್ಸ್’ಪೆಕ್ಟರ್ ಶಿವಪ್ರಸಾದ್ ಎಂ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಸಫಲವಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















