ಶಿವಮೊಗ್ಗ: ಚಲಿಸುತ್ತಿದ್ದ ಬಸ್ಸಿನಿಂದ ಪ್ರಯಾಣಿಕರೊಬ್ಬರು ಬಸ್‌ನಿಂದ ರಸ್ತೆಗೆ ಬಿದ್ದು ಗಾಯಗೊಂಡಿರುವ ಘಟನೆ ಬೇಡರ ಹೊಸಹಳ್ಳಿ ಕೆರೆ ಬಳಿ ನಡೆದಿದೆ.
ಬೆಳಗಾವಿ ಕೆಎಸ್‌ಆರ್‌ಟಿಸಿ ಡಿವಿಜನ್‌ನಲ್ಲಿ ಭದ್ರತಾ ಸಿಬ್ಬಂದಿ ತುಕಾರಾಂ ರಾಮ ಜೈನೋಜಿ (55) ಗಾಯಗೊಂಡವರು. ಶಿವಮೊಗ್ಗದಿಂದ ಬೆಳಗಾವಿಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಫೆ.24ರಂದು ಬೆಳಗ್ಗೆ ಶಿವಮೊಗ್ಗ-ಹೊನ್ನಾಳಿ ರಸ್ತೆಯ ಬೇಡರ ಹೊಸಹಳ್ಳಿ ಕ್ರಾಸ್ ಹತ್ತಿರ ಬಸ್ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಬಸ್ಸಿನ ಬಾಗಿಲನ್ನು ನಿರ್ವಾಹಕ ಹಾಕಿರಲಿಲ್ಲ. ಚಾಲಕನು ಕ್ರಾಸ್‌ನಲ್ಲಿ ಬಸ್ಸನ್ನು ಅತಿವೇಗವಾಗಿ ತಿರುಗಿಸಿದ ಪರಿಣಾಮ, ಬಾಗಿಲ ಪಕ್ಕದ ಸೀಟಿನಲ್ಲಿ ಕುಳಿತಿದ್ದ ತುಕಾರಾಂ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆ ಮತ್ತು ಕೈಕಾಲುಗಳಿಗೆ ರಕ್ತಗಾಯಗಳಾಗಿವೆ ಎಂದು ಆರೋಪಿಸಲಾಗಿದೆ. ಗಾಯಾಳುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com












