ಶಿವಮೊಗ್ಗ: ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿ.ಪಂ. ಸಿಇಓ ಹೇಮಂತ್ ಎನ್ ತಿಳಿಸಿದರು.



ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಪ್ರಕೃತಿ ಎಂಬ ವಿಷಯ ಕುರಿತು ಮಹಿಳೆಯರಿಗೆ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರಕಲೆ ಕೇವಲ ಕಲೆ ಮಾತ್ರವಲ್ಲದೆ, ಮನಸ್ಸಿಗೆ ನೆಮ್ಮದಿ ಮತ್ತು ಆನಂದ ನೀಡುವ ಮಾರ್ಗವಾಗಿದೆ. ಆದ್ದರಿಂದ ಆಸಕ್ತಿ ಉಳ್ಳವರು ಹೆಚ್ಚೆಚ್ಚು ಇಂತಹ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಪಡಿಸಿಕೊಳ್ಳಬೇಕೆಂದು ತಿಳಿಸಿದ ಅವರು ಸ್ಪರ್ಧಾರ್ಥಿಗಳಿಗೆ ಶುಭ ಕೋರಿದರು.
ಇದನ್ನೂ ಓದಿ – ಶಿವಮೊಗ್ಗ, ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ, ಡಿಸಿ ಪ್ರಭುಲಿಂಗ ಕವಳಿಕಟ್ಟಿ
74 ಸ್ಪರ್ಧಾರ್ಥಿಗಳು ಚಿತ್ರಕಲಾ ಸ್ಪರ್ಧೆಗೆ ನೋಂದಾಯಿಸಿಕೊಂಡಿದ್ದರು. ಸ್ಪರ್ಧಿಗಳಿಗೆ 2×2.5 ಅಳತೆಯ ಕ್ಯಾನ್ವಾಸನ್ನು ಆಯೋಜಕರಿಂದ ಒದಗಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿ.ಪಂ ಅಧಿಕಾರಿಗಳು, ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.
ವಿಜೇತರ ವಿವರ
ಮೊದಲ ಬಹುಮಾನ (ರೂ.8,000/-)ವನ್ನು ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪಡೆದುಕೊಂಡರು. ದ್ವಿತೀಯ ಬಹುಮಾನ (ರೂ.6,000/-) ನ್ನು ತೀರ್ಥಹಳ್ಳಿಯ ಭಾವನಾ ಹೊಳ್ಳ ಪಡೆದುಕೊಂಡಿದ್ದು, ತೃತೀಯ ಬಹುಮಾನ (ರೂ.4,000/- )ವನ್ನು ತೀರ್ಥಹಳ್ಳಿಯ ಆಶಾ ಉಮೇಶ್ ಹಾಗೂ ಎರಡು ಸಮಾಧಾನಕರ ಬಹುಮಾನ(ತಲಾ ರೂ.2,000/-) ವನ್ನು ಶಿಕಾರಿಪುರದ ಹೇಮಲತಮ್ಮ, ಶಿವಮೊಗ್ಗದ ಮನ್ವಿತಾ ಆರ್, ಆನವಟ್ಟಿಯ ಶಾಲಿನಿ ನಾಯಕ್ ಮತ್ತು ವಿಶೇಷ ಬಹುಮಾನವನ್ನು ಶಿವಮೊಗ್ಗದ ಸೌಜನ್ಯ ಆರ್ ಕೆ ಪಡೆದರು. ವಿಜೇತರಿಗೆ ಮಾ.26 ರಂದು ನಡೆಯುವ ಕಾರ್ಯಕ್ರಮದಲ್ಲಿ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














