ಶಿವಮೊಗ್ಗ: ಧಾರವಾಡ ಪ್ರತಿಫಲ ಫೌಂಡೇಶನ್ ಹಾಗೂ ಸತ್ವ ಫೌಂಡೇಶನ್ ಕರ್ನಾಟಕ ಮತ್ತು ಚಿರಾಯು ಕನ್ನಡ ವಾಹಿನಿ ವತಿಯಿಂದ ಈಚೆಗೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಗೀತಾ ಸತೀಶ್ ಅವರಿಗೆ ‘ರಾಷ್ಟ್ರೀಯ ವೀರ ವನಿತೆ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪ್ರದ್ಮಶ್ರೀ ಪುರಸ್ಕೃತರಾದ ಡಾ. ಎಸ್.ಜಿ. ಸುಶೀಲಮ್ಮ ಅವರು ಈ ಪ್ರಶಸ್ತಿ ನೀಡಿ ಗೌರವಿಸಿದರು.
ಸಾಮಾಜಿಕ ಕ್ಷೇತ್ರದ ಸಾಧನೆಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಗೀತಾ ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














