ಶಿವಮೊಗ್ಗ: ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ಕಾರು ಹಾಗೂ ಆಂಬುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.
ವಿನೋಬನಗರ ಕಡೆಯಿಂದ ಆಂಬುಲೆನ್ಸ್ ವಾಹನ ಆಗಮಿಸಿದ್ದು, ಈ ವೇಳೆ ಬ್ರೀಝಾ ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ನಿಂತಿದೆ. ಗಾಜುಗಳು ಸಂಪೂರ್ಣ ಪುಡಿಪುಡಿಯಾಗಿವೆ.
ಇದನ್ನೂ ಓದಿ > ಶಿವಮೊಗ್ಗ ಲಯನ್ ಸಫಾರಿಯಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು
ಕಾರಿನಲ್ಲಿದ್ದ ಮೂವರಿಗೆ ಹಾಗೂ ಆಂಬುಲೆನ್ಸ್ ಚಾಲಕನಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.














