ಆನಂದಪುರ: ತೋಟಕ್ಕೆ ನೀರು ಹಾಯಿಸಲು ತೆರಳಿದ್ದ ರೈತರೊಬ್ಬರು ಹಾವು ಕಚ್ಚಿ ಮೃತಪಟ್ಟ ದುರ್ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಹುಚ್ಚಪ್ಪ ಎಂ (65) ಮೃತಪಟ್ಟ ವ್ಯಕ್ತಿ. ರಾತ್ರಿ ತಮ್ಮ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ವೇಳೆ ವಿಷಕಾರಿ ಹಾವು ಕಚ್ಚಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ > ಶಿವಮೊಗ್ಗ, ಮಾ.27 ರಂದು ಉದ್ಯೋಗ ಮೇಳ, ನೇರ ಸಂದರ್ಶನದ ಮೂಲಕ ಆಯ್ಕೆ
ಹಾವು ಕಚ್ಚಿದ ತಕ್ಷಣವೇ ಅವರು ಮನೆಗೆ ಮರಳಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಬಳಿಕ ತಕ್ಷಣವೇ ಅವರನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು . ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸುಮಾರು ೯:೪೫ರ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














