ರಿಪ್ಪನ್‌ಪೇಟೆ: ಭಾರಿ ಗಾಳಿ-ಮಳೆ ಹಾಗೂ ಆಲಿಕಲ್ಲು ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಧರೆಗುರುಳಿ ವಾಹನ ಹಾಗೂ ಮನೆಗಳಿಗೆ ಹಾನಿಯಾದ ಘಟನೆಗಳು ವರದಿಯಾಗಿವೆ.
ಇದನ್ನೂ ಓದಿ > ಗಾಳಿ-ಮಳೆಯ ಅಬ್ಬರ, ಬೈಕ್ ಮೇಲೆ ಮರ ಉರುಳಿ ಸವಾರನಿಗೆ ಗಾಯ,
ರಿಪ್ಪನ್ ಪೇಟೆಯ ಪಟ್ಟಣದ ಶಬರೀಶನಗರದಲ್ಲಿ ಭಾರಿ ಮಾರುತಗಳಿಗೆ ತೆಂಗಿನ ಮರವೊಂದು ಬುಡಸಮೇತ ಕಿತ್ತು ಪಕ್ಕದಲ್ಲೇ ನಿಲ್ಲಿಸಲಾಗಿದ್ದ ಟಾಟಾ ಏಸ್ ವಾಹನದ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಾಹನದ ಮೇಲ್ಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ಘಟನೆಯ ವೇಳೆ ವಾಹನದಲ್ಲಿ ಯಾರೂ ಇಲ್ಲದ ಕಾರಣ ಪ್ರಾಣಾಪಾಯ ತಪ್ಪಿದಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ > ಭದ್ರಾವತಿಯ ಯುವಕನ ಬಂಧನ: 11 ಅಪರಾಧ ಪ್ರಕರಣಗಳು ಬೆಳಕಿಗೆ!
ವಿಷಯ ತಿಳಿಯುತ್ತಿದ್ದಂತೆಯೇ ಪಿಎಸ್‌ಐ ರಾಜು ರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಲಾಯಿತು.














