ಬೆಂಗಳೂರು: ಗುಡ್ ಫ್ರೈಡೇ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಇದನ್ನೂ ಓದಿ > ಶಿವಮೊಗ್ಗ, ನಾಳೆ ಗುಡ್ಡೇಕಲ್ ದೇವಸ್ಥಾನ ರಥೋತ್ಸವ
ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 03 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಏ. 04) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ಏಪ್ರಿಲ್ 04 (ಶನಿವಾರ) ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ.
ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ.
ಇದನ್ನೂ ಓದಿ > ಶಿವಮೊಗ್ಗ, ನಾಳೆ ಗುಡ್ಡೇಕಲ್ ದೇವಸ್ಥಾನ ರಥೋತ್ಸವ














