• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ, ದಶಮಾನೋತ್ಸವ ಸಂಭ್ರಮ, ಬೆಂಕಿ ರಹಿತ ಅಡುಗೆ ಸೇರಿದಂತೆ ವಿವಿಧ ಸ್ಪರ್ಧೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 2, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ, ದಶಮಾನೋತ್ಸವ ಸಂಭ್ರಮ, ಬೆಂಕಿ ರಹಿತ ಅಡುಗೆ ಸೇರಿದಂತೆ ವಿವಿಧ ಸ್ಪರ್ಧೆ
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಎಂಬಿಎ ವಿಭಾಗದ ವತಿಯಿಂದ  ಸಾಂಸ್ಕೃತಿಕ ಮತ್ತು ನಿರ್ವಹಣಾ ಕ್ಷೇತ್ರದ ’ಉತ್ಥಾನ-2026’ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಬ್ಯುಸಿನೆಸ್ ಪ್ಲಾನ್, ಬೆಸ್ಟ್ ಮ್ಯಾನೇಜರ್, ಬ್ಯುಸಿನೆಸ್ ಕ್ವಿಜ್, ಸ್ಟಾಕ್ ಮಾರ್ಕೆಟ್, ಚಿತ್ರಕಲೆ, ಸಮೂಹ ನೃತ್ಯ, ಬೆಂಕಿ ರಹಿತ ಅಡುಗೆ, ಪ್ರೇಮಗೀತೆಗಳ ಗಾಯನ, ವಾಲಿಬಾಲ್, ಥ್ರೋಬಾಲ್, ಚೆಸ್, ಇ-ಸ್ಪೋರ್ಟ್ಸ್ ಸೇರಿದಂತೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ 15 ಪದವಿ ಕಾಲೇಜುಗಳ ಸುಮಾರು 750 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸುಕದಿ ಭಾಗವಹಿಸಿದ್ದರು.

ಇದನ್ನೂ ಓದಿ > ಶಿಕಾರಿಪುರ, 425 ಚೀಲ ಯೂರಿಯಾ ರಸಗೊಬ್ಬರ ವಶಕ್ಕೆ

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಸುತ್ತಲಿನ ವಾತಾವರಣದಲ್ಲಿರುವ ವಾಸ್ತವತೆಯನ್ನು ವಿಮರ್ಶಿಸುವಂತಹ ಕುತೂಹಲ ಬೆಳೆಸಿಕೊಳ್ಳಿ ಎಂದು ಹೇಳಿದರು.
ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ವಿಷಯಗಳ ಬಗ್ಗೆ ಕುತೂಹಲ ಮೂಡಿಸಿಕೊಳ್ಳುವಂತಹ ಅನಿವಾರ್ಯತೆ ಇದೆ. ಯುವ ಸಮೂಹ ಮುಂದಿನ ಜನಾಂಗದ ರಾಯಭಾರಿಗಳು. ನಮ್ಮ ಹಿರಿಯರು ಕಟ್ಟಿ ಬೆಳೆಸಿದ ಸಂಸ್ಕೃತಿ ಸಂಸ್ಕರಾವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ಇಂದಿನ ಯುವ ಸಮೂಹದ ಮೇಲಿದೆ. ನಮ್ಮ ಸಂಸ್ಕೃತಿಯನ್ನು ಎಂದಿಗೂ ಮರೆಯದಿರಿ. ನಾವು ಮರೆತಿದ್ದ ಸೌದೆ ಒಲೆಗಳು ಮತ್ತೆ ಮುನ್ನಲೆಗೆ ಬಂದಿದೆ. ಹಾಗಾಗಿಯೇ ಯಾವ ವಿಚಾರಗಳ ಬಗ್ಗೆಯು ತಾತ್ಸಾರ ಬೇಡ. ವ್ಯಕ್ತಿಯ ದುರ್ಬಲ ಮನಸ್ಥಿತಿ, ಆತನನ್ನೆ ಹಾಳು ಮಾಡುತ್ತದೆ. ಓದುವುದು, ಬರೆಯುವುದನ್ನು ಕಲಿಸುವುದು ವಿದ್ಯಾಭ್ಯಾಸವಲ್ಲ, ಅದರೊಂದಿಗೆ ವಿನಯ ವಿವೇಕ ಕಲಿಸುವುದೆ ನಿಜವಾದ ವಿದ್ಯಾಭ್ಯಾಸ. ದೃಷ್ಟಿ ಸರಿಯಿದ್ದಾಗ ಮಾತ್ರ, ಸೃಷ್ಟಿ ಸರಿಯಿರುತ್ತದೆ. ವಾದದ ಮಾತಿಗಿಂತ, ಸ್ವಾದದ ಮೌನವೇ ಲೇಸು. ಸಂಸ್ಕಾರ ತುಂಬಿದ ಮಾತುಗಳು ನಿಮ್ಮದಾಗಲಿ. ಸಧೃಡತೆಯ ಮನಸ್ಸಿನ ಬೆಳವಣಿಗೆಗೆ ಇಂತಹ ವೇದಿಕೆಗಳನ್ನು ಪೂರಕವಾಗಿ ಬಳಸಿಕೊಳ್ಳಿ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್‌ಇಎಸ್ ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ಕಾರ್ಯಕ್ರಮ ಸಂಯೋಜಕರಾದ ಡಾ.ಸಂತೋಷ್ ಶಾನಭಾಗ್, ಡಾ.ಪ್ರವೀಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಡಾ.ಸುಭದ್ರ.ಪಿ.ಎಸ್ ಪ್ರಾರ್ಥಿಸಿ, ಡಾ.ವಿ.ವಿಕ್ರಮ್ ಸ್ವಾಗತಿಸಿದರು.

Tags: Dashamanotsav celebrationsfireless cookingkannada newskannada news liveshivamoggaVarious competitions including JNNCE
Previous Post

ಶಿಕಾರಿಪುರ, 425 ಚೀಲ ಯೂರಿಯಾ ರಸಗೊಬ್ಬರ ವಶಕ್ಕೆ

Next Post

ಸಾಗರ, ಬಿಹಾರ ಮೂಲದ ಯುವಕನ ಕೊಲೆ?, ಓರ್ವನ ಬಂಧನ, ಎಸ್ಪಿ ನಿಖಿಲ್ ಬಿ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ, ಬಿಹಾರ ಮೂಲದ ಯುವಕನ ಕೊಲೆ?, ಓರ್ವನ ಬಂಧನ, ಎಸ್ಪಿ ನಿಖಿಲ್ ಬಿ ಹೇಳಿದ್ದೇನು?

ಸಾಗರ, ಬಿಹಾರ ಮೂಲದ ಯುವಕನ ಕೊಲೆ?, ಓರ್ವನ ಬಂಧನ, ಎಸ್ಪಿ ನಿಖಿಲ್ ಬಿ ಹೇಳಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL