• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್‌ಸ್ಥಾಪನೆಗೆ ನಗರದಿಂದ ಪಾದಯಾತ್ರೆ, ಯಾರೆಲ್ಲಾ ಭಾಗವಹಿಸಿದ್ದರು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 5, 2026
in ಹೊಸನಗರ
ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್‌ಸ್ಥಾಪನೆಗೆ ನಗರದಿಂದ ಪಾದಯಾತ್ರೆ, ಯಾರೆಲ್ಲಾ ಭಾಗವಹಿಸಿದ್ದರು?
Share on FacebookShare on TwitterShare on WhatsApp

ಶಿವಮೊಗ್ಗ: ಹೊಸನಗರ ವಿಧಾನ ಸಭಾ ಕ್ಷೇತ್ರದ ಮರು ಘೋಷಣೆಗೆ ಆಗ್ರಹಿಸಿ ನಗರದಿಂದ ರಿಪ್ಪನ್ ಪೇಟೆಯವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪಾದಯಾತ್ರೆ ಸಭೆಯಲ್ಲಿ ಮಾತನಾಡಿದ ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್‌ರಚನಾ ಸಮಿತಿ ಅಧ್ಯಕ್ಷರಾಗಿರುವ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪುನರ್‌ಸ್ಥಾಪನೆಗೆ ಬೇಡಿಕೆ ಸಲ್ಲಿಸುವ ಹಕ್ಕು ಇಲ್ಲಿನ ಜನತೆಗಿದೆ. ಮುಳುಗಡೆಯಿಂದ ಬದುಕು ಕಳೆದುಕೊಂಡ ಜನತೆಗೆ ಆಡಳಿತಾತ್ಮಕ ಸುವ್ಯವಸ್ಥೆ ಸಿಗುವಂತಾಗಲು ಪ್ರತ್ಯೇಕ ಕ್ಷೇತ್ರ ರಚನೆಯೇ ಪರಿಹಾರವಾಗಿದೆ ಎಂದು ಹೇಳಿದರು.

ಇದನ್ನೂ ಓದಿ > ಗ್ಯಾಸ್ ಸಿಲಿಂಡರ್‌ಗಾಗಿ ಹೆದ್ದಾರಿ ತಡೆದು ಪ್ರತಿಭಟನೆ, ಸಾರ್ವಜನಿಕರ ಆಕ್ರೋಶ

ಹೊಸನಗರದ ಜನತೆ ಒಂದಲ್ಲಾ ಒಂದು ಸಂಕಷ್ಟ ಅನುಭವಿಸುತ್ತಲೇ ಬಂದಿದ್ದಾರೆ. ಕಳೆದ 25ವರ್ಷಗಳ ಹಿಂದೆ ಕ್ಷೇತ್ರವನ್ನೂ ಕಳೆದುಕೊಂಡಿದ್ದೇವೆ. ತಾಲೂಕನ್ನು ಇಬ್ಭಾಗ ಮಾಡಿ ಎರಡು ಕ್ಷೇತ್ರಗಳಿಗೆ ಹಂಚಿರುವುದು ಅನ್ಯಾಯ. ಈಗ ಕಾಲ ಕೂಡಿಬಂದಿದೆ. ನಮ್ಮ ಧ್ವನಿ ಗಟ್ಟಿಯಾಗಬೇಕಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ರಚನೆ ಆಗುವವವರೆಗೂ ಹೋರಾಟದ ನಿರಂತರತೆ ಕಾಪಾಡಿಕೊಳ್ಳಬೇಕಿದೆ. ಸಾರ್ವಜನಿಕರು ಭಿನ್ನ ಭೇದ ಮರೆತು ಪಾಲ್ಗೊಳ್ಳಬೇಕೆಂದು ಅವರು ಕರೆ ನೀಡಿದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, 2008ರ ಮೊದಲು ನಡೆದ ಕ್ಷೇತ್ರ ಮರುವಿಂಗಡಣೆ ಸಂದರ್ಭದಲ್ಲಿಯೇ ತಮಗೆ ಆಡಳಿತಾತ್ಮಕ ಸಮಸ್ಯೆ ಆಗುವ ಮುನ್ಸೂಚನೆ ಸಿಕ್ಕಿತ್ತು. ತಾವು ಹಾಗೂ ಕಾಗೋಡು ತಿಮ್ಮಪ್ಪ ಹೊಸನಗರ ಕ್ಷೇತ್ರ ರದ್ದುಗೊಳಿಸುವ ತೀರ್ಮಾನವನ್ನು ವಿರೋಧಿಸಿದ್ದೆವು. ಆದರೆ ಅಂದಿನ ಆಯೋಗ ನಮ್ಮ ಅಹವಾಲನ್ನು ಮಾನ್ಯ ಮಾಡಲಿಲ್ಲ. ಕೇಂದ್ರ ಸರಕಾರ ಈಗ ಪುನರ್‌ವಿಂಗಡಣೆಗೆ ಮುಂದಾಗಿದೆ. ವಿಶೇಷ ಲೋಕಸಭಾ ಅಧಿವೇಶನ ಸಹಾ ನಡೆಯಲಿದೆ. ಮತ್ತೊಮ್ಮೆ ಕ್ಷೇತ್ರ ಪುನರ್‌ರಚನೆ ಆಗುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ > ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಯ 5 ಬೆರಳು ಕಟ್?, ಘಟನೆ ನಡೆದಿದ್ದೇಲಿ?

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಹೊಸನಗರ ಕ್ಷೇತ್ರ ಹೋರಾಟಕ್ಕೆ ತಮ್ಮ ಸಂಪೂರ್ಣ ಸಹಮತವಿದೆ. ಒಂದು ತಾಲೂಕು ಎರಡು ಕ್ಷೇತ್ರಗಳಿಗೆ ಹಂಚಿ ಹೋಗಿರುವುದರಿಂದ ಕೇವಲ ಜನತೆಗಷ್ಟೇ ಅಲ್ಲ, ಆಡಳಿತ ನಡೆಸುವವರಿಗೂ ಸಮಸ್ಯೆಗಳಾಗುತ್ತವೆ ಎಂದರು.
ನಾರಾಯಣಗುರು ಮಠದ ಶ್ರೀರೇಣುಕಾನಂದ ಸ್ವಾಮೀಜಿ, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕಿಮ್ಮನೆ ರತ್ನಾಕರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ, ಹೋರಾಟ ಸಮಿತಿಯ ಪ್ರಮುಖರಾದ ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಕೆ.ವಿ. ಕೃಷ್ಣಮೂರ್ತಿ, ಹಾಲಗದ್ದೆ ಉಮೇಶ್, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಎನ್.ಆರ್. ದೇವಾನಂದ್, ಚಿದಂಬರ, ಆಲುವಳ್ಳಿ ವೀರೇಶ್, ಎಂ.ಎಂ. ಪರಮೇಶ್, ಬಂಡಿ ರಾಮಚಂದ್ರ, ಶ್ವೇತಾ ಬಂಡಿ, ಸುಮಾ ಸುಬ್ರಹ್ಮಣ್ಯ, ಕರುಣಕರ ಶೆಟ್ಟಿ, ನಾರಾಯಣ ಕಾಮತ್, ಸುರೇಶ್ ಸ್ವಾಮಿರಾವ್, ಮುರುಳಿ, ರಿಪ್ಪನ್‌ಪೇಟೆ ಚಾಬುಸಾಬ್, ರಿಪ್ಪನ್‌ಪೇಟೆ ವರ್ತೆಶ್, ಚರ್ಚ್ ಪಾದ್ರಿಗಳು ಮಾಸೀದಿಯ ಧರ್ಮಗುರುಗಳು ವಿವಿಧ ಧಾರ್ಮಿಕ ಸಂಸ್ಥೆ ಪ್ರಮುಖರು ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

95ವರ್ಷದ ಮಾಜೀ ಶಾಸಕ ಬಿ.ಸ್ವಾಮಿರಾವ್ ಪಾದಯಾತ್ರೆಯಲ್ಲಿ ಬಾಗಿ

ನನ್ನ ಜೀವಿತಾವಧಿಯಲ್ಲಿ ಹೊಸನಗರ ಕ್ಷೇತ್ರ ಮಾಡಬೇಕು ಹೊಸನಗರ ಕ್ಷೇತ್ರಕ್ಕೆ ಶಾಸಕರನ್ನು ಮಾಡಬೇಕು ಎಂಬ ಹಠ ಹಿಡಿದು ಈ ಹೋರಾಟದ ರೂವಾರಿಯಾಗಿರುವ ಹೊಸನಗರ ಕ್ಷೇತ್ರದ ಮಾಜೀ ಶಾಸಕರಾದ ಬಿ.ಸ್ವಾಮಿರಾವ್‌ರವರು 95ನೇ ವಯಸ್ಸಿನಲ್ಲಿ ಯಾವುದೇ ಯುವಕರಿಗಿಂತ ಕಮ್ಮಿಯಿಲ್ಲದಂತೆ ನಗರ ಬಿದನೂರಿನಿಂದ ಹೊಸನಗರಕ್ಕೆ ಸುಮಾರು 16ಕಿ.ಮೀ ಕಾಲ್ನಡಿಗೆಯಲ್ಲಿ ಪಾದಯಾತ್ರೆ ನಡೆಸಿದ್ದು, ನಾಳೆಯು ಸುಮಾರು 26 ಕಿ.ಮೀಟರ್ ದೂರದ ರಿಪ್ಪನ್‌ಪೇಟೆಯವರೆವಿಗೂ ನಡೆಯುವುದಾಗಿ ಹೇಳಿದ್ದು ಯಾರ ಮಾತಿಗೂ ಸಪ್ಪು ಹಾಕದೇ ಯಾವುದೇ ವಾಹನವನ್ನು ಏರದೇ ಕಲ್ನಾಡಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ.

Tags: Hiking from the cityHosanagara assembly constituencykannada newskannada news livelatest newsmalnad newsಶಿವಮೊಗ್ಗಹೊಸನಗರ
Previous Post

ಗ್ಯಾಸ್ ಸಿಲಿಂಡರ್‌ಗಾಗಿ ಹೆದ್ದಾರಿ ತಡೆದು ಪ್ರತಿಭಟನೆ, ಸಾರ್ವಜನಿಕರ ಆಕ್ರೋಶ

Next Post

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL