• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ ‘ಬೂಟ್ ಕ್ಯಾಂಪ್’ ಉದ್ಘಾಟನೆ, ದೇಶದ ವಿವಿಧ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 6, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ ‘ಬೂಟ್ ಕ್ಯಾಂಪ್’ ಉದ್ಘಾಟನೆ, ದೇಶದ ವಿವಿಧ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ!
Share on FacebookShare on TwitterShare on WhatsApp
ಶಿವಮೊಗ್ಗ: ನಾವೀನ್ಯಯುತ ಚಿಂತನೆ‌ ಮತ್ತು ಅದರ ವಿನ್ಯಾಸ ಸಮಾಜದ ಅಭಿವೃದ್ಧಿಯ ಪ್ರಮುಖ ಬದಲಾವಣೆಯ ಶಕ್ತಿಯಾಗಿದೆ ಎಂದು ಎಐಸಿಟಿಇ ಇನೋವೇಶನ್‌ ಕೇಂದ್ರದ ಪ್ರಾದೇಶಿಕ ಸಂಯೋಜಕರಾದ ಅಶೀಷ್‌ ತ್ರಿಪಾಠಿ ಹೇಳಿದರು.
ಇದನ್ನೂ ಓದಿ > 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?
ನಗರದ  ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್‌ ಹಾಗೂ ಎಸ್‌ಬಿಐ ಫೌಂಡೇಷನ್‌ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಐದು ದಿನಗಳ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್‌ ಕ್ಯಾಂಪ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ 2 ಕಡೆ ಬೂಟ್ ಕ್ಯಾಂಪ್

ಜಮ್ಮು ಕಾಶ್ಮೀರ, ಲಡಾಕ್ ಸೇರಿದಂತೆ ದೇಶದಾದ್ಯಂತ 30 ಕೇಂದ್ರಗಳಲ್ಲಿ ಬೂಟ್ ಕ್ಯಾಂಪ್‌ ನಡೆಯುತ್ತಿದ್ದು, ವಿಶೇಷವಾಗಿ ಕರ್ನಾಟಕದಲ್ಲಿ ಕೇವಲ 2 ಕಾಲೇಜುಗಳಲ್ಲಿ ಮಾತ್ರ ಈ ಕಾರ್ಯಕ್ರಮ ನಡೆಯುತ್ತಿದೆ. ಅದರಲ್ಲಿ ಜೆ.ಎನ್.ಎನ್.ಸಿ ಕಾಲೇಜು ಕೂಡ ಒಂದು ಎಂಬುದು ಹೆಮ್ಮೆಯ ವಿಷಯವಾಗಿದೆ. ದೇಶದ ವಿವಿಧ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕೊನೆಯ ದಿನ ವಿದ್ಯಾರ್ಥಿಗಳು ತಮ್ಮ ನಾವೀನ್ಯಯುತ ಚಿಂತನೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕ‌ ಕೆ.ಎಲ್.ಅರುಣ್ ಕುಮಾರ್ ಹೇಳಿದರು.
ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ, ಆವಿಷ್ಕಾರ ಎಂಬುದು ಕೇವಲ ಒಂದು ಆಯ್ಕೆಯಲ್ಲ, ಅದು ಒಂದು ಅವಶ್ಯಕತೆ. ಇದು ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುವುದರ ಜೊತೆಗೆ, ನೈಜ ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಅದ್ದರಿಂದ ಯುವ ಸಮೂಹದಲ್ಲಿ ಕಾಲೇಜು ಹಂತಗಳಲ್ಲಿಯೆ, ಉದ್ಯಮಶೀಲ ಮನೋಭಾವ ಬೆಳೆಸುವುದು ಅತ್ಯಂತ ಅಗತ್ಯವಾಗಿದೆ.
ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ, ದಶಮಾನೋತ್ಸವ ಸಂಭ್ರಮ, ಬೆಂಕಿ ರಹಿತ ಅಡುಗೆ ಸೇರಿದಂತೆ ವಿವಿಧ ಸ್ಪರ್ಧೆ
ಈ ಬೂಟ್‌ಕ್ಯಾಂಪ್ ಕಾರ್ಯಕ್ರಮವು ನಾವೀನ್ಯಯುತ ಆಲೋಚನೆ ಮತ್ತು ಅದರ ಅನುಷ್ಠಾನದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿದೆ. ಉದ್ಯೋಗ ಹುಡುಕುವ ಮನಸ್ಥಿತಿಯಿಂದ, ಉದ್ಯೋಗ ಸೃಷ್ಟಿಸುವ ಆತ್ಮಬಲ ನಿರ್ಮಿಸಲು ಇಂತಹ ವೇದಿಕೆಗಳು ಪ್ರೇರಣಾದಾಯಕವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಅರೇಕಾ ಟೀ ಕಂಪನಿಯ ಸಂಸ್ಥಾಪಕರಾದ ನಿವೇದನ್‌ ನೆಂಪೆ ಮಾತನಾಡಿ, ಹೊಸತನದೆಡೆಗೆ ಚಿಂತಿಸುವಾಗ ಮೂದಲಿಕೆಯ ಮಾತುಗಳು ಸಹಜ. ಸಮಸ್ಯೆಗಳಿದ್ದ ಕಡೆ ಅವಕಾಶಗಳು ಹೆಚ್ಚಾಗಿರುತ್ತದೆ. ಅದರ ಜೊತೆಯಲ್ಲಿ ಸವಾಲುಗಳು ನಮ್ಮನ್ನು ಕಾಡುತ್ತದೆ. ಅಂತಹ ಸವಾಲುಗಳನ್ನು ಸಮರ್ಪಕವಾಗಿ ನಿರ್ವಹಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ. ನಿಮ್ಮಲ್ಲಿರುವ ನಾವೀನ್ಯಯುತ ಯೋಚನೆಗಳನ್ನು ಬಲವಾಗಿ ನಂಬಿ‌ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ನಮ್ಮ ದೇಶವು ಸೇವಾ ಆಧಾರಿತ ಆರ್ಥಿಕತೆಯಿಂದ, ಜ್ಞಾನ ಆಧಾರಿತ ಆರ್ಥಿಕತೆಯತ್ತ ಸಾಗಬೇಕು. ನಾವೀನ್ಯತೆ ಎಂದಾಗ ನಾವು ಹೊಸದನ್ನು ಸೃಷ್ಟಿಸುವುದು ಮಾತ್ರ ಎಂದು ಅರ್ಥೈಸುತ್ತೇವೆ. ಆದರೆ ಅದು ಸದಾ ಸಂಪೂರ್ಣ ಹೊಸದಾಗಿರಬೇಕೆಂದಿಲ್ಲ. ಈಗಿರುವ ವ್ಯವಸ್ಥೆಯಲ್ಲಿ ಸಣ್ಣ ಸುಧಾರಣೆಗಳನ್ನು ಮಾಡುವುದು ಕೂಡ ಒಂದು ಮಹತ್ವದ ಆವಿಷ್ಕಾರವಾಗಿದೆ.
ಗಾಂಧೀಜಿಯವರ ಸ್ವದೇಶಿ ಚಳುವಳಿಯ ಕಲ್ಪನೆಯು ಕೇವಲ ವಿದೇಶಿ ವಸ್ತುಗಳನ್ನು ತಿರಸ್ಕರಿಸುವುದಾಗಿರಲಿಲ್ಲ. ಜೊತೆಯಲ್ಲಿ ನಮ್ಮ ಜನರಿಗೆ, ನಮ್ಮ ಪರಿಸರಕ್ಕೆ ತಕ್ಕಂತಹ ಉತ್ಪನ್ನಗಳನ್ನು ನಿರ್ಮಿಸುವುದು ಕೂಡ. ಇಂದು ನಾವು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಮುಂದೆ ಇದ್ದೇವೆ. ಆದರೆ ತಂತ್ರಜ್ಞಾನವನ್ನು ಸ್ವತಃ ಅಭಿವೃದ್ಧಿಪಡಿಸುವಲ್ಲಿ ಹಿಂದುಳಿದಿದ್ದೇವೆ. ಇಂದಿಗೂ ಹಲವಾರು ಕ್ಷೇತ್ರಗಳಲ್ಲಿ, ಇತರೆ ದೇಶಗಳ ಮೇಲೆ ಅವಲಂಬಿತರಾಗಿದ್ದೇವೆ. ಈ ಅವಲಂಬನೆ ನಮ್ಮನ್ನು ಅಸ್ಥಿರತೆಗೆ ದೂಡಬಹುದು. ಅದನ್ನು ತಪ್ಪಿಸಲು ನಾವು ತಾಂತ್ರಿಕ ಕ್ಷೇತ್ರದ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನಾ ಡೀನ್‌ ಡಾ.ಎಸ್.ವಿ.ಸತ್ಯನಾರಾಯಣ, ಎಐಸಿಟಿಇ ಜೆಎನ್‌ಎನ್‌ಸಿಇ ಐಡಿಯಾ ಲ್ಯಾಬ್‌ ಸಂಯೋಜಕ ಡಾ.ಎಂ.ಎಚ್.ಮೋಯಿನುದ್ದಿನ್‌ ಖಾನ್‌, ಬೂಟ್‌ಕ್ಯಾಂಪ್‌ ಸಂಯೋಜಕ ಕೆ.ಎಲ್.ಅರುಣ್‌ ಕುಮಾರ್‌, ವಾದ್ವಾನಿ ಫೌಂಡೇಶನ್ ಸಂಪನ್ಮೂಲ ವ್ಯಕ್ತಿ ಡಾ.ಸುಪ್ರಭ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Tags: 200 students from various colleges across the country participated!5-day AICTE 'Boot Camp' inaugurated at JNNCE CollegeJNNCE Collegekannada newskannada news liveNESshimogaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

Next Post

ನಗರಸಭೆ ಸಿಬ್ಬಂದಿ ಎಂದು ನಂಬಿಸಿ 11.62 ಲಕ್ಷದ ಚಿನ್ನಾಭರಣ ಕಳವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ 11.62 ಲಕ್ಷದ ಚಿನ್ನಾಭರಣ ಕಳವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL