ಶಿವಮೊಗ್ಗ: ಯಶವಂತಪುರ-ಶಿವಮೊಗ್ಗ ಇಂಟರ್ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ 4 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ.
ಸರ ಕಳೆದುಕೊಂಡರು ಬೆಂಗಳೂರಿನ ಸಹಕಾರನಗರ ನಿವಾಸಿ ಕೆ.ಎಂ.ವಿದ್ಯಾರಾಣಿ.
ಮಾ.2ರಂದು ಬೆಳಗ್ಗೆ ವಿದ್ಯಾರಾಣಿ ಅವರು ಯಶವಂತಪುರ-ಶಿವಮೊಗ್ಗ ಇಂಟರ್ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಲಗೇಜ್ ಸ್ಟ್ಯಾಂಡ್ ಮೇಲಿದ್ದ ಅವರ ಬ್ಯಾಗ್ ಬಳಿ ಇಬ್ಬರು ಅಪರಿಚಿತರು ಕುಳಿತಿದ್ದರು. ಮಧ್ಯಾಹ್ನ ಶಿವಮೊಗ್ಗಕ್ಕೆ ಬಂದು ಮನೆ ತಲುಪಿದ ನಂತರ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿದ್ದ ಪೌಚ್ ಹಾಗೂ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ > ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್, ಪರ್ಯಾಯ ಮಾರ್ಗ ವ್ಯವಸ್ಥೆ
ಈ ಬಗ್ಗೆ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೃತ್ಯ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ ಪ್ರಕರಣವನ್ನು ಇದೀಗ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.














