ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2026ರ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ, ಅಂದರೆ ಏಪ್ರಿಲ್ 23 ರಂದು ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ > ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ
ಈ ಹಿಂದೆ ನಿಗದಿಪಡಿಸಿದ್ದ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿಯೇ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶವನ್ನು ಪ್ರಕಟಿಸುತ್ತಿದೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಹೈಕೋರ್ಟ್ ಆದೇಶ ಪಾಲಿಸುತ್ತೇವೆ. ಹಿಂದಿಗೆ ಅಂಕಗಳನ್ನು ನೀಡಲಾಗವುದು. ಗುರುವಾರ ಸುದ್ದಿಗೋಷ್ಟಿ ಬಳಿಕ ಫಲಿತಾಂಶ ಇಲಾಖೆಯ ಅಧಿಕೃತ ಜಾಲತಾಣ (KSEAB) ಅಲ್ಲಿ ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ > ಮೇ.15ರೊಳಗೆ ಈ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಹೋರಾಟ, ಕೆ.ಈ.ಕಾಂತೇಶ್
ಈ ವರ್ಷ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲಿಗೆ ಅಂಕಗಳನ್ನೂ ನೀಡುವಂತೆ ಹೈಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ಇದನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ ಎಂದರು.















