• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 14, 2026
in ಶಿವಮೊಗ್ಗ
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ
Share on FacebookShare on TwitterShare on WhatsApp

ಶಿವಮೊಗ್ಗ: ವಿಧಾನ ಪರಿಷತ್ ಅಧಿವೇಶನದ ಸಂದರ್ಭದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಡೆಸಿದ ಚರ್ಚೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಹತ್ವದ ಸುಧಾರಣೆಗಳನ್ನು ತಿದ್ದುಪಡಿ ಮಾಡಿ ಜಾರಿಗೆ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ತಿಳಿಸಿದರು.

ಈ ಕುರಿತಂತ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲಿ ಹಲವು ಸಮಸ್ಯೆ ಹಾಗೂ ವಿಚಾರಗಳ ಕುರಿತಾಗಿ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿತ್ತು. ಇವುಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದಿದ್ದಾರೆ.

ಈ ಹಿಂದೆ ರಾಜ್ಯದ ಸಣ್ಣ ಕ್ಲಿನಿಕ್ ಅಥವಾ ಆಸ್ಪತ್ರೆಗಳು ಬಹುಮಹಡಿ ಕಟ್ಟಡದ ಒಂದು ಭಾಗದಲ್ಲಿದ್ದರೂ ಇಡೀ ಕಟ್ಟಡಕ್ಕೆ ಅಗ್ನಿಶಾಮಕ ಇಲಾಖೆಯಿಂದ ಎನ್.ಒ.ಸಿ ಪಡೆಯುವುದು ಕಡ್ಡಾಯವಾಗಿತ್ತು. ಹಳೆಯ ಅಗ್ನಿಸುರಕ್ಷತಾ ಮಾನದಂಡದ ಪ್ರಕಾರ ಶೇ. 99ಕ್ಕೂ ಹೆಚ್ಚು ಆಸ್ಪತ್ರೆಗಳು ಪರವಾನಗಿ ಪಡೆಯಲು ಸಂಕಷ್ಟ ಎದುರಿಸುತ್ತಿದ್ದವು. ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ,PKCWÉC, ಕೂಡ್ಲಿಗಿ ಶಾಸಕರಾದ ಡಾ. ಶ್ರೀನಿವಾಸ್ ಅವರು ಒಡಗೂಡಿ ನಾನು ನಡೆಸಿದ ಹೋರಾಟದ ಫಲವಾಗಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವರಾದ ಪರಮೇಶ್ವರ್ ಅವರು ಜಂಟಿ ಸಭೆ ನಡೆಸಿ ನಿಯಮಗಳನ್ನು ಸರಳೀಕರಿಸಿದ್ದಾರೆ ಎಂದರು.

ಅದರಂತೆ 20.99 ಮೀಟರ್’ಗಿಂತ ಕಡಿಮೆ ಎತ್ತರವಿರುವ ಆಸ್ಪತ್ರೆಗಳಿಗೆ ಕನಿಷ್ಠ ಅಗ್ನಿ ಸುರಕ್ಷತಾ ಮಾನದಂಡ ನಿಗದಿಪಡಿಸಿ ಜನವರಿ 9, 2026ರಂದು ಆದೇಶ ರಡಿಸಲಾಗಿದೆ. ವಸತಿ ರಹಿತ 21 ಮೀಟರ್’ಗಿಂತ ಕಡಿಮೆ ಎತ್ತರದ ಸಣ್ಣ ಕ್ಲಿನಿಕ್ ಹಾಗೂ ರಕ್ತನಿಧಿ ಕೇಂದ್ರಗಳು ಇನ್ನು ಮುಂದೆ ಅಗ್ನಿಶಾಮಕ ಇಲಾಖೆಯ ಬದಲು ಆರೋಗ್ಯ ಇಲಾಖೆ ಮಟ್ಟದಲ್ಲೇ ತಪಾಸಣೆಗೊಳಪಡಲಿವೆ ಮತ್ತು ನವೀಕರಣ ಶುಲ್ಕವನ್ನು ಕಟ್ಟಡದ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ ಎಂದರು.

ರಾಜ್ಯದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಸೇರಿ ಒಟ್ಟು 8,728 ಆಸ್ಪತ್ರೆಗಳಿವೆ ಇವುಗಳಲ್ಲಿ 329 ಆಸ್ಪತ್ರೆಗಳು ಮಾತ್ರ ಫೈರ್ ಕ್ಲಿಯರೆನ್ಸ್ ಪಡೆದುಕೊಂಡಿದೆ. ಈ ಕಾನೂನು ತಿದ್ದುಪಡಿಯಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೂ ಅನುಕೂಲವಾಗಿಲಿದೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತು ಮಾತನಾಡಿದ ಶಾಸಕರು, ರಾಜ್ಯದ ಖಾಸಗಿ ವಿಶ್ವವಿದ್ಯಾಲಯಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಅತಿ ಹೆಚ್ಚು ಸೀಟುಗಳನ್ನು ಮೀಸಲಿಟ್ಟು ಸರ್ಕಾರಿ ಕಾಲೇಜುಗಳಲ್ಲಿ ಕೇವಲ ಶೇ. 10ರಷ್ಟು ಮಾತ್ರ ಅವಕಾಶ ನೀಡುತ್ತಿರುವುದು ತಾರತಮ್ಯಕ್ಕೆ ಕಾರಣವಾಗಿತ್ತು. ಒಂದು ಖಾಸಗಿ ವಿವಿಯಲ್ಲಿ 4,320 ಇಂಜಿನಿಯರಿಂಗ್ ಸೀಟುಗಳಿದ್ದು ಅದರಲ್ಲಿ4,100 ಸೀಟುಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಮೀಸಲಿದೆ, ಆದರೆ ರಾಜ್ಯದ ಒಟ್ಟು ಸರ್ಕಾರಿ ಕಾಲೇಜುಗಳಲ್ಲಿ ಕೇವಲ 6,495 ಸೀಟುಗಳಿದ್ದರೆ ಅದರಲ್ಲಿ ಕೇವಲ 700 ಸೀಟುಗಳು ಮಾತ್ರ ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಮೀಸಲಿದೆ. ರಾಜ್ಯದಲ್ಲಿ ಖಾಸಗಿ ಮತ್ತು ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 1,50,000 ಸೀಟುಗಳಿದ್ದರೆ ಅದರಲ್ಲಿ 1 ಲಕ್ಷ ಸೀಟುಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್ ಗೆ ಇದೆ ಎಂಬ ಆಘಾತಕಾರಿ ವಿಷಯವನ್ನು ಗಮನ ಸೆಳೆಯಲಾಗಿತ್ತು. ಇದರ ಪರಿಣಾಮವಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಒಂದೇ ಕೋರ್ಸಿಗೆ ಅಧಿಕ ಸೀಟು ಪಡೆಯುವುದನ್ನು ನಿರ್ಬಂಧಿಸಲು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಸೌಲಭ್ಯ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದು ಖಾಸಗಿ ವಿವಿಗಳ ಹಾವಳಿಗೆ ಕಡಿವಾಣ ಹಾಕುವುದಲ್ಲದೆ, ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.

ಇನ್ನು, ವಿವಿಧ ಆರೋಗ್ಯ ಯೋಜನೆಗಳಡಿ ನೀಡಲಾಗುವ ಚಿಕಿತ್ಸಾ ದರಗಳ ತಾರತಮ್ಯ ನಿವಾರಣೆಯಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನವನ್ನು ಶಾಸಕರು ಶ್ಲಾಘಿಸಿದರು. ಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ 2025 ರ ಅಕ್ಟೋಬರ್ 13ರಿಂದ ಅನ್ವಯವಾಗುವಂತೆ ದೇಶದಾದ್ಯಂತ EJKR ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ.

ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, ಆರೋಗ್ಯ ಭಾಗ್ಯ, ಇಎಸ್’ಐ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲೂ ಈ ಪರಿಷ್ಕೃತ ದರವನ್ನು ಜಾರಿಗೆ ತರಲು ಸರ್ಕಾರಕ್ಕೆ ಒತ್ತಾಯಿಸಿದ್ದೀನಿ. ಇದರ ಪರಿಣಾಮವಾಗಿ ರಾಜ್ಯ ಸರ್ಕಾರ ರಾಜ್ಯದಲ್ಲಿ ಜಾರಿಗೆ ತರುವ ಪ್ರಕ್ರಿಯೆಲ್ಲಿದೆ ಎಂದು ಡಾ.ಧನಂಜಯ ಸರ್ಜಿ ಹೇಳಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಗರ ಬಿಜೆಪಿ ಅಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಹರಿಕೃಷ್ಣ, ಎಚ್.ಸಿ. ಮಾಲತೇಶ್, ಮುಖಂಡರಾದ ಶಿವರಾಜ್ ಮತ್ತು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ್ ಉಪಸ್ಥಿತರಿದ್ದರು.

Tags: BJPcomputer scincedr dhananjaya sarjieaducationhealthmalnad newsMLCshimogashivamogga
Previous Post

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

Next Post

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL