ಶಿವಮೊಗ್ಗ : ಹೊಸನಗರದ ಹೊರವಲಯ ರಾಜ್ಯ ಹೆದ್ದಾರಿ 766 ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5.15 ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ತಿರುವಿನ ಎಡಭಾಗಕ್ಕೆ ಮಗುಚಿ ಬಿದ್ದಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ > ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!
ಬಸ್‌ನಲ್ಲಿದ್ದ 11 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ.
ಬಸ್‌ನಲ್ಲಿರುವ ಪ್ರಯಾಣಿಕರು ಕೊಲ್ಲೂರು ದೇವಸ್ಥಾನ, ಗೃಹಪ್ರವೇಶ, ಮದುವೆ ಮನೆಗಳಿಗೆ ತೆರಳುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ > ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!
ಹೊಸನಗರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.













