ಸೊರಬ : ತಾಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿ, ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಶಿರಾಳಕೊಪ್ಪ ಕಡೆಯಿಂದ ಮರದ ದಿಮ್ಮಿಗಳನ್ನು ಸಾಗರದತ್ತ ಕೊಂಡೊಯ್ಯುತ್ತಿದ್ದ ಲಾರಿಯೊಂದು, ಉಳವಿ ಕಡೆಯಿಂದ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಉಳವಿಯ ಕೆರೆ ಸಮೀಪದ ಮಾರಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಟಾಟಾ ಏಸ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಇದನ್ನೂ ಓದಿ > ಶಿವಮೊಗ್ಗ, ಮೇ 11 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ಅಪಘಾತದಲ್ಲಿ ಟಾಟಾ ಏಸ್‌ನಲ್ಲಿ ಪ್ರಯಾಣಿಸುತ್ತಿದ್ದ ಉಳವಿಯ ಐಡಿಯಲ್ ಶಾಮಿಯಾನದ ಆಫ್ರಿದ್ (28) ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಅವರ ಕಾಲುಗಳಿಗೆ ಭಾರೀ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಗಾಯಾಳುವಿಗೆ ಮೊದಲು ಸಾಗರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ > ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ
ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸೊರಬ ಪೊಲೀಸ್ ಠಾಣೆ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.













