ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಕನಹಸೂಡಿ ಗ್ರಾಮದ ದೊಡ್ಡಕೆರೆ ಬಳಿ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಇದನ್ನೂ ಓದಿ > ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ನಿಧನ, ಆಗಿದ್ದೇನು?
ಕಾಕನಹಸೂಡಿ ಗ್ರಾಮದ ದೊಡ್ಡಕೆರೆ ಸಮೀಪ ಕಾಣಿಸಿಕೊಂಡ ಕಾಡಾನೆಯನ್ನು ಕಂಡು ದಾರಿಹೋಕರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸ್ಥಳೀಯರು ಶಬ್ದ ಮಾಡುವ ಮೂಲಕ ಹಾಗೂ ಕೂಗಾಡಿ ಆನೆಯನ್ನು ಓಡಿಸಲು ಪ್ರಯತ್ನಿಸಿದರೂ ಸಹ, ಕಿಂಚಿತ್ತೂ ಹೆದರದ ಕಾಡಾನೆ ಘೀಳಿಡುತ್ತಾ ಗ್ರಾಮಸ್ಥರನ್ನು ಅಟ್ಟಿಸಿಕೊಂಡು ಬಂದಿದೆ. ಈ ದೃಶ್ಯವು ಸಾರ್ವಜನಿಕರ ಮೊಬೈಲ್‌ನಲ್ಲಿ ಸೆರೆಯಾಗಿದೆ.

https://www.instagram.com/reel/DYRO6TyxZ2m/?igsh=MXRtamdpYWhqazZ4Zw==














