ಶಿವಮೊಗ್ಗ: ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ಇಂದು ಮಂಗಳವಾರ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು 90 ಪೈಸೆಯಷ್ಟು ಏರಿಸಿವೆ.
ಕೇವಲ ಮೂರು ದಿನಗಳ ಅವಧಿಯಲ್ಲಿ ಇದು ಎರಡನೇ ಬಾರಿ ದರ ಪರಿಷ್ಕರಣೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.
ಇದನ್ನೂ ಓದಿ > ಶಿವಮೊಗ್ಗ, ಲಿಫ್ಟ್’ನಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ, ಘಟನೆ ನಡೆದಿದ್ದು ಹೇಗೆ?
ಕಳೆದ ಶುಕ್ರವಾರವಷ್ಟೇ (ಮೇ 15) ತೈಲ ಕಂಪನಿಗಳು ಪ್ರತಿ ಲೀಟರ್ ಇಂಧನಕ್ಕೆ ಬರೊಬ್ಬರಿ 3 ರೂಪಾಯಿ ಹೆಚ್ಚಳ ಮಾಡಿದ್ದವು. ಈ ಬರೆ ಮಾಸುವ ಮುನ್ನವೇ ಸಾರ್ವಜನಿಕರಿಗೆ ಮತ್ತೊಂದು ದರ ಏರಿಕೆಯ ಶಾಕ್ ನೀಡಲಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 97.77ರೂಪಾಯಿಯಿಂದ 98.64 ರೂಪಾಯಿಗೆ ಹೆಚ್ಚಿಸಲಾಗಿದ್ದು, ಡೀಸೆಲ್ ದರವು 90.67 ರೂಪಾಯಿಯಿಂದ 91.58 ರೂಪಾಯಿಗೆ ಏರಿಕೆಯಾಗಿದೆ.
ಇದನ್ನೂ ಓದಿ > ಯೂರೋಪ್‌ನಲ್ಲಿ ಬಸವ ಜಯಂತಿ, ಜರ್ಮನಿಯ ಎರ್ಲಾಂಗ್ ನಗರದಲ್ಲಿ ಭವ್ಯ ಮೆರವಣಿಗೆ
ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 108.06ಗೆ ತಲುಪಿದೆ. ಹಳೆಯ ದರ ಪ್ರತಿ ಲೀಟರ್‌ಗೆ 107.11 ಇತ್ತು. ಪ್ರೀಮಿಯಂ ಆವೃತ್ತಿಯಾದ ಪವರ್ ಪೆಟ್ರೋಲ್ ದರದಲ್ಲೂ 94 ಪೈಸೆ ಏರಿಕೆಯಾಗಿದೆ. ನಿನ್ನೆ ಪ್ರತಿ ಲೀಟರ್‌ಗೆ 117.05 ಇತ್ತು, ಇಂದು ಅದು ಪ್ರತಿ ಲೀಟರ್‌ಗೆ 117.99 ಕ್ಕೆ ತಲುಪಿದೆ.















