ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2 ರಿಂದ 3 ವರ್ಷ ಹಳೆಯ ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿದೆ.
ಇದನ್ನೂ ಓದಿ > ಶಿವಮೊಗ್ಗ, ಲಿಫ್ಟ್’ನಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ, ಘಟನೆ ನಡೆದಿದ್ದು ಹೇಗೆ?
ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಒತ್ತುವರಿ ಜಮೀನಿನಲ್ಲಿನ ಕೃಷಿ ಹೊಂಡದ ಪಕ್ಕದಲ್ಲಿ ಮಣ್ಣಿನಲ್ಲಿ ಮುಚ್ಚಿ ಇಡಲಾಗಿದ್ದ 14 ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ. ಗಣೇಶ ಬಿನ್ ಬಾಬುಶೆಟ್ಟಿ (40), ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963 ಹಾಗೂ ಕರ್ನಾಟಕ ಅರಣ್ಯ ಕಾನೂನು 1969ರ ಅಡಿಯಲ್ಲಿ ಹೊಸನಗರ ವಲಯ ಕಚೇರಿಯಲ್ಲಿ ಅರಣ್ಯ ಮೊಕದ್ದಮೆ ಸಂಖ್ಯೆ 14/2026-27 ದಾಖಲಿಸಲಾಗಿದೆ.
ಇದನ್ನೂ ಓದಿ > ಗ್ರಾಹಕರಿಗೆ ಮತ್ತೆ ಶಾಕ್, ಪೆಟ್ರೋಲ್, ಡೀಸೆಲ್ ದರ ಎರಡನೇ ಬಾರಿ ಏರಿಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಿದೆ ರೇಟ್?















