ಶಿವಮೊಗ್ಗ: ಜಿಲ್ಲೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಮುಂಬರುವ ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಪ್ರಥಮ ಸಭೆಯಲ್ಲಿ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.
1. ಇದನ್ನೂ ಓದಿ > ವ್ಯಕ್ತಿಯ ಸಾವು ಆತ್ಮಹತ್ಯೆಯಲ್ಲ, ಕೊಲೆ!, ಇಬ್ಬರ ವಿರುದ್ಧ ಪ್ರಕರಣ
ಜೂನ್ 28ರ ಭಾನುವಾರ ಬೆಳಿಗ್ಗೆ 8 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಜಿಲ್ಲಾದ್ಯಂತ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆಯ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಗ್ರಾ.ಪಂ ಕಾರ್ಯದರ್ಶಿಗಳು ಮತ್ತು ಗ್ರಾಮ ಲೆಕ್ಕಿಗರು ಸಕ್ರಿಯವಾಗಿ ಸಹಕರಿಸಬೇಕು ಎಂದರು.
ಸಾರಿಗೆ ಮತ್ತು ಮೂಲಸೌಕರ್ಯ: ಲಸಿಕಾ ಅಭಿಯಾನದ ಸುಗಮ ಸಂಚಾರಕ್ಕಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಜೀಪುಗಳ ವ್ಯವಸ್ಥೆ ಮಾಡಬೇಕು. ಹಾಗೂ ಜೂನ್ 27ರಿಂದ ಜುಲೈ 1 ರವರೆಗೆ ಜಿಲ್ಲಾದ್ಯಂತ ನಿರಂತರ ವಿದ್ಯುತ್ ಸರಬರಾಜು ಇರುವಂತೆ ನೋಡಿಕೊಳ್ಳಲು ಮೆಸ್ಕಾಂ ಗೆ ಸೂಚಿಸಿದರು.
ಧಾರ್ಮಿಕ ಮತ್ತು ವಿವಿಧ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಾ.ಪಂ.ಇಓ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಹಾಗೂ ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಮಾಹಿತಿ, ಶಿಕ್ಷಣ ಮತ್ತು ಸಂಪರ್ಕ (ಐಇಸಿ) ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಕಸ ವಿಲೇವಾರಿ ವಾಹನಗಳಲ್ಲಿ ಆಡಿಯೋ ಜಿಂಗಲ್ಸ್ ನುಡಿಸಬೇಕು.
2. ಇದನ್ನೂ ಓದಿ > ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!
ತಾಲ್ಲೂಕುಗಳಲ್ಲಿ ಸಿಡಿಪಿಇ ಗಳು ಮೇಲ್ವಿಚಾರಣೆ ಮಾಡಬೇಕು. ನಗರಾಭಿವೃದ್ಧಿ ಇಲಾಖೆಯಿಂದ ನಗರ ಟಾಸ್ಕ್ಫೋರ್ಸ್ ಸಭೆ ನಡೆಸಿ ಬ್ಯಾನರ್, ಪೋಸ್ಟರ್ ಮೂಲಕ ಪ್ರಚಾರ ನೀಡಬೇಕು. ಹಾಗೂ ಎಲ್ಲರೂ ಕೈಜೋಡಿಸಿ ಜಿಲ್ಲೆಯಲ್ಲಿ ಶೇ.100 ರಷ್ಟು ಪೋಲಿಯೋ ಲಸಿಕೆಯನ್ನು ಹಾಕುವ ಮೂಲಕ ಅಭಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಅಂದು ಎಲ್ಲಾ ಶಾಲೆಗಳನ್ನು ಪೋಲಿಯೋ ಲಸಿಕೆ ನೀಡಲು ತೆರೆದಿರಬೇಕು. ಹಿಂದಿನ ದಿನವೇ ಮಕ್ಕಳಿಂದ ಜಾಥಾ ನಡೆಸಿ ಸುತ್ತಮುತ್ತ ಜಾಗೃತಿ ಮೂಡಿಸಬೇಕು. ಕಾರ್ಮಿಕ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಅಭಿಯಾನ ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದರು.
ಆರ್ ಸಿ ಹೆಚ್ ಓ ಡಾ. ಮಲ್ಲಪ್ಪ ಮಾತನಾಡಿ, ಭಾರತ ದೇಶವು 2014 ರಿಂದ ಪೋಲಿಯೋ ಮುಕ್ತವಾಗಿದೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಡೆಯ ಪ್ರಕರಣ ಕಂಡುಬAದಿತ್ತು. ಪಾಕಿಸ್ತಾನ ಮತ್ತು ಅಘ್ತಾನಿಸ್ತಾನದಲ್ಲಿ ಒಂದೆರಡು ಪ್ರಕರಣಗಳಿದ್ದು ಅಲ್ಲಿಂದ ಬರುವ ಸಂಭವ ಇರುವ ಕಾರಣ ಅಭಿಯಾನವನ್ನು ನಿರಂತರವಾಗಿ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ 4,39,013 ಮನೆಗಳಿಂದ 123388 ಮಕ್ಕಳನ್ನು ಪೋಲಿಯೋ ಲಸಿಕೆ ನೀಡಲು ಗುರುತಿಸಲಾಗಿದೆ. ಟ್ರಾನ್ಸಿಟ್, ಮೊಬೈಲ್ ಸೇರಿ ಒಟ್ಟು 1069 ಬೂತ್‌ಗಳು ಅಂದು ಕಾರ್ಯ ನಿರ್ವಹಿಸಲಿವೆ. 3960 ಲಸಿಕಾ ಕಾರ್ಯಕರ್ತರಿದ್ದು, ಬೂತ್‌ಗೆ ಬಾರದೇ ಉಳಿದ ಮಕ್ಕಳನ್ನು ಗುರುತಿಸಲು ಜೂನ್ 29 ಮತ್ತು 30 ರಂದು ಗ್ರಾಮೀಣ ಭಾಗದಲ್ಲಿ ಹಾಗೂ ಜುಲೈ 1 ರಂದು ನಗರ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ನೀಡಲಾಗುವುದು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್ ಹಾಗೂ ಇತೆರೆಡೆ ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ಡಿಹೆಚ್ ಓ ಡಾ.ನಟರಾಜ್, ಡಿಎಸ್ ಓ ಡಾ.ನಾಗರಾಜ್ ನಾಯ್ಕ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗುಡದಪ್ಪ, ಇತರೆ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು














