ಭದ್ರಾವತಿ: ತಾಲೂಕಿನ ದೊಡ್ಡೇರಿಯ ಶಿವನಿ ರಸ್ತೆಯ ಬದಿಯಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ.
ಕೆಂಪಮ್ಮ ಎಂಬುವವರು ರಸ್ತೆಯ ಎಡಭಾಗದಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಬೈಕ್ ಚಾಲಕ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಮಹಿಳೆ ರಸ್ತೆಗೆ ಬಿದ್ದಿದ್ದು, ಬಲಗಾಲಿನ ಮೊಣಕಾಲಿನ ಕೆಳಗೆ ಮೂಳೆ ಮುರಿತವಾಗಿದೆ. ಅಲ್ಲದೆ ತಲೆ ಹಾಗೂ ದೇಹದ ಇತರ ಭಾಗಗಳಿಗೂ ಒಳಪೆಟ್ಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ > ಸುತ್ತುಕೋಟೆ ಬಳಿ ಬಸ್ -ಬೈಕ್ ನಡುವೆ ಭೀಕರ ಅಪಘಾತ, ಓರ್ವ ಸಾವು
ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ >10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್














