ಶಿವಮೊಗ್ಗ : ತೀರ್ಥಹಳ್ಳಿ ತಾಲೂಕು ಮುಡುಬಾ ಸಮೀಪ ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿರುವ ಘಟನೆ ನಡೆದಿದೆ.
ಇದನ್ನೂ ಓದಿ > ಜೂನ್ 6 ರಂದು ಈ ಗ್ರಾಮಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?
ಇದನ್ನೂ ಓದಿ > ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!
ಕೆಎಸ್‌ಆರ್‌ಟಿಸಿ ಐರಾವತ ಬಸ್ ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ತೀರ್ಥಹಳ್ಳಿಗೆ ಸಂಚರಿಸುತ್ತಿತ್ತು. ಮುಡುಬಾ ಸಮೀಪ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರೆಗೆ ಹೋಗಿದೆ. ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ.
ಇದನ್ನೂ ಓದಿ > ಟ್ರಾಫಿಕ್ ಪೊಲೀಸರಿಂದ ದಿಢೀರ್ ಕಾರ್ಯಾಚರಣೆ, ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ.
ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.















