• About Us
  • Advertise
  • Privacy & Policy
  • Contact Us
Friday, June 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ | ಗುಡಿಸಲಿಗೆ, ಕಟ್ಟಡಗಳಿಗೆ ಬೆಂಕಿ, ತುರ್ತು ಸೇವೆಗಳ ಆಗಮನ, ಏನಾಯ್ತು?

ವೈಮಾನಿಕ ದಾಳಿ-ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಣಕು ಪ್ರದರ್ಶನ | ನಗರದಲ್ಲಿ ಯಶಸ್ವಿ ಮಾಕ್ ಡ್ರಿಲ್ ಕಾರ್ಯಾಚರಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 5, 2026
in ಶಿವಮೊಗ್ಗ
ಶಿವಮೊಗ್ಗ | ಗುಡಿಸಲಿಗೆ, ಕಟ್ಟಡಗಳಿಗೆ ಬೆಂಕಿ, ತುರ್ತು ಸೇವೆಗಳ ಆಗಮನ, ಏನಾಯ್ತು?
Share on FacebookShare on TwitterShare on WhatsApp

ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಶುಕ್ರವಾರ ಸಂಜೆ ನಗರದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ಮಾಕ್ ಡ್ರಿಲ್’ (ಅಣಕು ಪ್ರದರ್ಶನ) ಯಶಸ್ವಿಯಾಗಿ ಜರುಗಿತು.

2026 ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ನಾಗರೀಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು ಕೇಂದ್ರ ಗೃಹ ಸಚಿವಾಲಯವು ಸೂಚನೆಯನ್ವಯ ಜಿಲ್ಲಾ ಮಟ್ಟದಲ್ಲಿ ಇಂದು ಈ ಪ್ರದರ್ಶನವನ್ನು‌ಯಶಸ್ವಿಯಾಗಿ ಕೈಗೊಳ್ಳಲಾಯಿತು.

ಎರಡು ನಿಮಿಷಗಳ ಸೈರನ್ ಮೊಳಗಿಸುವಿಕೆ:

ಬಹು ಮಹಡಿ‌ಕಟ್ಟಡ ಮತ್ತು ಶಾಲಾ ಸಮುಚ್ಷಯಕ್ಕೆ ವೈಮಾನಿಕ ಅಣಕು ಪ್ರದರ್ಶನದ ಆರಂಭದಲ್ಲಿ ಶತ್ರುಗಳ ವಾಯುದಾಳಿಯ ಮುನ್ಸೂಚನೆ ನೀಡುವಂತೆ ‘ಕೋಡ್ ರೆಡ್’ ಎಚ್ಚರಿಕೆಯ 2 ನಿಮಿಷಗಳ ಸೈರನ್ ಮೊಳಗಿಸಲಾಯಿತು. ತಕ್ಷಣವೇ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಪ್ರಕ್ರಿಯೆ ಆರಂಭವಾಯಿತು.

ರಕ್ಷಣಾ ಕಾರ್ಯಾಚರಣೆ ಮತ್ತು ಪ್ರಥಮ ಚಿಕಿತ್ಸೆ

ದಾಳಿಯಿಂದ ಕಟ್ಟಡಗಳು ಧರಾಶಾಯಿಯಾದಾಗ ಸಾರ್ವಜನಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ಅವಶೇಷಗಳಡಿ ಸಿಲುಕಿದವರನ್ನು ಹುಡುಕಿ ರಕ್ಷಿಸುವುದು ಹಾಗೂ ಗಾಯಾಳುಗಳಿಗೆ ತಕ್ಷಣವೇ ತಾತ್ಕಾಲಿಕ ವೈದ್ಯಕೀಯ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸುವ , ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸು, ನಂತರ ಸ್ಥಳ ಪರಿಶೀಲನೆ ಕೈಗೊಳ್ಳುವ, ಐಇಡಿ ಲಭ್ಯವಾಗಿದ್ದು, ಬಾಂಬ್ ಕಿಲ್ಲರ್ ನ್ನು‌ ತೆಗೆದು ಸೇಫ್ ಡಿಸ್ ಪೋಸಬಲ್ ಏರಿಯಾ ಗೆ ತರಲಾದ ಹಾಗೂ ಬಿಡಿಎಸ್ ಅಧಿಕಾರಿ‌ಗಳು‌ಮತ್ತು ಸೊಕೊ‌ ತಂಡ ಕಾರ್ಯಾಚರಣೆ ಕುರಿತು ಉನ್ನತ ಅಧಿಕಾರಿಗಳಿಗೆ ವರದಿ‌ ನೀಡಿದ ಹಾಗೂ ಉನ್ನತ ಅಧಿಕಾರಿಗಳು ಹೆಚ್ಚಿನ ತನಿಖೆಗೆ ಆದೇಶಿದ ಪ್ರಾತ್ಯಕ್ಷಿಕೆ ನಡೆಸಲಾಯಿತು.

ಬಸ್ ಹೈಜ್ಯಾಕ್ :

ಅಪರಿಚಿತ ಸಶಸ್ತ್ರ ದುಷ್ಕರ್ಮಿಗಳು (ನಟಿಸಿದ ಸಿಬ್ಬಂದಿ) ನಿಯಂತ್ರಣಕ್ಕೆ ಪಡೆದು, ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂಬ ತುರ್ತು ಸಂದೇಶ ಪೊಲೀಸ್ ನಿಯಂತ್ರಣ ಕೊಠಡಿಗೆ ತಲುಪಿತು. ಸಂದೇಶ ತಲುಪಿದ ಕೆಲವೇ ನಿಮಿಷಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದ ಕಮಾಂಡೋ ಮಾದರಿಯ ಶಸ್ತ್ರಸಜ್ಜಿತ ಪಡೆ ಮತ್ತು ಶ್ವಾನ ದಳ ಸ್ಥಳಕ್ಕೆ ಧಾವಿಸಿತು.

ಇಡೀ ಬಸ್ ನಿಲ್ದಾಣದ ಆವರಣವನ್ನು ಸುತ್ತುವರಿದ ಭದ್ರತಾ ಸಿಬ್ಬಂದಿ, ತಕ್ಷಣವೇ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಿದರು. ದುಷ್ಕರ್ಮಿಗಳೊಂದಿಗೆ ಸಂಧಾನ ನಡೆಸುವ ನಾಟಕೀಯ ಸನ್ನಿವೇಶದ ನಡುವೆಯೇ, ಮತ್ತೊಂದೆಡೆ ಅತ್ಯಂತ ಜಾಣ್ಮೆಯಿಂದ ಬಸ್ಸಿನ ಹಿಂಬಾಗಿಲು ಮತ್ತು ಕಿಟಕಿಗಳ ಮೂಲಕ ಒಳನುಗ್ಗಿದ ವಿಶೇಷ ಕಮಾಂಡೋ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿತು. ಕೇವಲ ಕೆಲವೇ ನಿಮಿಷಗಳಲ್ಲಿ ದುಷ್ಕರ್ಮಿಗಳನ್ನು ಜರೆದು ಹಿಡಿದು, ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಯಾವುದೇ ಅಪಾಯವಿಲ್ಲದೆ ಅತ್ಯಂತ ಯಶಸ್ವಿಯಾಗಿ ರಕ್ಷಿಸಲಾಯಿತು. ಕಾರ್ಯಾಚರಣೆ ನಂತರ 2 ನಿಮಿಷಗಳ ಸೈರನ್ ಮೊಳಗಿಸಲಾಯಿತು.‌

ವಿವಿಧ ಇಲಾಖೆಗಳ ಯಶಸ್ವಿ ಸಮನ್ವಯ

ಈ ಬೃಹತ್ ಅಣಕು ಪ್ರದರ್ಶನದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ನಾಗರಿಕ ರಕ್ಷಣಾ ಸ್ವಯಂಸೇವಕರು, ಆರೋಗ್ಯ ಇಲಾಖೆ, ಎನ್‌ಸಿಸಿ, ಮಹಾನಗರ ಪಾಲಿಕೆ, ಕಂದಾಯ ಇಲಾಖೆ ಹಾಗೂ ಕೆಎಸ್ಆರ್‌ಟಿಸಿ ಸಿಬ್ಬಂದಿ ಅತ್ಯಂತ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಸಿದ್ಧತೆಯನ್ನು ಪ್ರದರ್ಶಿಸಿದರು.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ನಿಖಿಲ್ ಬಿ‌ ಅವರ ನೇತೃತ್ವದಲ್ಲಿ ಇಲಾಖೆಗಳ ನಡುವಿನ ಸಮನ್ವಯತೆಯನ್ನು ಕಟ್ಟುನಿಟ್ಟಾಗಿ ಪರೀಕ್ಷಿಸಲಾಯಿತು.

ಇದನ್ನೂ ಓದಿ > ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ಶಾಕ್!,ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಸಾರ್ವಜನಿಕರಿಗೆ ಧೈರ್ಯ ತುಂಬಿದ ಅಧಿಕಾರಿಗಳು

“ಇದು ಕೇವಲ ದೇಶದ ಭದ್ರತಾ ಮುನ್ನೆಚ್ಚರಿಕೆಯ ತರಬೇತಿ ಪ್ರಕ್ರಿಯೆಯಾಗಿದೆ. ಇಂತಹ ತುರ್ತು ಪರಿಸ್ಥಿತಿ ಎದುರಾದಾಗ ಸಾರ್ವಜನಿಕರು ಭಯಭೀತರಾಗದೆ, ಧೈರ್ಯದಿಂದ ಸ್ವಯಂ ರಕ್ಷಣೆ ಮಾಡಿಕೊಳ್ಳಲು ಮತ್ತು ನಾಗರಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಈ ಅಣಕು ಪ್ರದರ್ಶನ ಆಯೋಜಿಸಲಾಗಿದೆ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು, ನೌಕರರು‌ ಹಾಜರಿದ್ದರು.

ಅಣಕು ಪ್ರದರ್ಶನದ ನಂತರ ಜಿಲ್ಲಾಧಿಕಾರಿಗಳು ಮಾತನಾಡಿ, ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ‌ ಮಾಕ್ ಡ್ರಿಲ್ ಉದ್ದೇಶವಾಗಿದೆ. ಎಲ್ಲ ನೌಕರರು ವಾಸ್ತವದಂತೆ ಪ್ರದರ್ಶಿಸಿದ್ದೀರಿ. ಇಲಾಖೆಗಳ ಸಮನ್ವಯತೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಭಾಗವಹಿಸಿದ ಎಲ್ಲರಿಗೆ ಧನ್ಯವಾದಗಳು ಎಂದು ತಿಳಿಸಿದರು.

ಇದನ್ನೂ ಓದಿ >ಸಂಚಾರ ದಂಡಕ್ಕೆ ಮತ್ತೆ 50% ವಿನಾಯ್ತಿ, ಎಲ್ಲಿಯವರೆಗೆ ಅವಕಾಶ?

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ‌ ನಿಖಿಲ್ ಬಿ‌‌ ಮಾತನಾಡಿ, ತುರ್ತು ಪರಿಸ್ಥಿತಿ, ವಿಪತ್ತು ಎದುರಾದಾಗ ಇಲಾಖೆಗಳ ಸನ್ನದ್ದತೆ ಮತ್ತು ಸಾರ್ವಜನಿಕರ ಸಹಕಾರ ಸಮನ್ವಯತೆ ಅಗತ್ಯವಾಗಿದ್ದು, ಅತ್ಯಂತ ವಾಸ್ತವವಾಗಿ ಅಣಕು ಪ್ರದರ್ಶನ ಮಾಡಲಾಗಿದ್ದು, ಪ್ರದರ್ಶನದಲ್ಲಿ ಪೊಲೀಸ್, ಗೃಹ ರಕ್ಷಕ, ಎನ್ ಸಿ ಸಿ ಸೇರಿದಂತೆ 300 ಜನರು ಪಾಲ್ಗೊಂಡಿದ್ದು ಸಹಕರಿಸಿದ ಎಲ್ಲ ಅಧಿಕಾರಿ, ನೌಕರರು ಹಾಗೂ ಸಾರ್ವಜನಿಕರಿಗೆ ವಂದನೆ ತಿಳಿಸಿದರು.

ಹಾಗೂ ಗೃಹ ರಕ್ಷಕ ದಳದ ಕಮಾಂಡೆಂಟ್ ಚೇತನ್ ರವರು ಅಣಕು ಪ್ರದರ್ಶನ ಯಶಸ್ವಿಗೊಳಿಸಿದ ಸರ್ವರಿಗೆ ವಂದಿಸಿದರು.

Tags: 'Mock drill'ambulanceFire breaks out in huts and multi-storey buildings in Shivamoggafire brigadekannada newskannada news livelatest newsmalnad newspolice vehicles arrive!shimogashivamoggaಮಾಕ್ ಡ್ರಿಲ್'ಶಿವಮೊಗ್ಗ
Previous Post

ಶಿವಮೊಗ್ಗ, 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Next Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಸಾಧಕರಿಗೆ ಬಹುಮಾನ 

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಸಾಧಕರಿಗೆ ಬಹುಮಾನ 

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಸಾಧಕರಿಗೆ ಬಹುಮಾನ 

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

June 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026

Copyright © 2026 Yuva Dhwani. Designed by KIPL