ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೯ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸ್ಕೂಟಿ ಸವಾರ ಮೃತಪಟ್ಟಿದ್ದಾರೆ.
ಆಯನೂರು ಸಮೀಪದ ಹೊಸೂರು ನಿವಾಸಿ ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (೬೫) ಮೃತರು.
ತೀರ್ಥಹಳ್ಳಿ ತಾಲ್ಲೂಕಿನ ಅಂಬು ತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಈ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













