ಶಿವಮೊಗ್ಗ: ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಇಂದು ನಡೆದಿದೆ.
ವಿಶ್ವ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ.
ಇದನ್ನೂ ಓದಿ > ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ತಪಾಸಣೆ
ಭದ್ರಾವತಿ ಹಳದಮ್ಮ ಬೀದಿಯ ನಿವಾಸಿಯಾದ ವಿಶ್ವ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಎರಡು ಕೈ ತುಂಡಾಗುವ ರೀತಿ ಹಾಗೂ ಕುತ್ತಿಗೆ ಭಾಗಕ್ಕೆ ಹರಿತವಾದ ಆಯುಧದಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ > ಶಾಲಾ, ಕಾಲೇಜು ವಾಹನಗಳ ದಿಢೀರ್ ತಪಾಸಣೆ, ನಾಲ್ವರು ಚಾಲಕರ ವಿರುದ್ಧ ಕೇಸ್!
ಗಾಯಾಳುವಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ >ಕುಸಿದ ಶರಾವತಿ ಹಿನ್ನೀರು ಮಟ್ಟ, ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ!
ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














