ಶಿವಮೊಗ್ಗ: ಸಾಗರ ತಾಲ್ಲೂಕಿನ ಕೆಳದಿ ಸಮೀಪದ ಹಾರೆಗೊಪ್ಪ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು ಕಂಡಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಪ್ರವೀಣ ಹೆಗಡೆ (36) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
ಪ್ರವಿಣ್ ಹೆಗಡೆ ಅವರು ತಂತಿಗಳಿಗೆ ಅಡ್ಡಲಾಗಿ ಬೆಳೆದಿದ್ದ ಕೊಂಬೆಗಳನ್ನು ಕತ್ತರಿಸಲು ಮುಂದಾಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಈ ಅವಘಡ ಸಂಭವಿಸಿದೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ತಾರಗೋಡು ಗ್ರಾಮದವರಾದ ಇವರು ಕೆಲ ವರ್ಷಗಳ ಹಿಂದೆ ಹಾರೆಗೊಪ್ಪದಲ್ಲಿ ಕೃಷಿ ಭೂಮಿ ಖರೀದಿಸಿ ನೆಲೆಸಿದ್ದರು.
ಇದನ್ನೂ ಓದಿ > ನಾಳೆ ಕೆ.ಎಸ್.ಈಶ್ವರಪ್ಪ ಜನ್ಮದಿನೋತ್ಸವ, ವಿವಿಧ ಕಾರ್ಯಕ್ರಮಗಳ ಆಯೋಜನೆ
ಕೆಎಸ್‌ಸಿಎ ಶಿವಮೊಗ್ಗ ವಲಯದ ಕ್ರಿಕೆಟ್ ಲೀಗ್‌ನಲ್ಲಿ ನಿಸರಾಣಿ ಕ್ಲಬ್ ಪರ ಆಡಿದ್ದರು. ಹವ್ಯಕ ಕ್ರಿಕೆಟ್ ಲೀಗ್ ಸೇರಿದಂತೆ ಅನೇಕ ಟೂರ್ನಿಗಳಲ್ಲೂ ಆಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ > ಅಡಿಕೆ ಕಳ್ಳತನ, ಶಿಗ್ಗಾಂವ್ ನ ಇಬ್ಬರು ಸೆರೆ, 9 ಕ್ವಿಂಟಾಲ್ ಅಡಿಕೆ ವಶ
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















