ಶಿವಮೊಗ್ಗ : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಹಾಗೂ ದೇವಸ್ಥಾನದ ಹುಂಡಿ ಹಣ ಕಳವು ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ > ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಸಂಭ್ರಮ, ಅಪಾರ ಅಭಿಮಾನಿಗಳು ಭಾಗಿ
ಹೊಸನಗರ ನಗರ ರಸ್ತೆಯ ಗುರುಶಕ್ತಿ ಪೆಟ್ರೋಲ್ ಬಂಕ್ ಸಮೀಪ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಬಗ್ಗೆ ದ್ಯಾವರ್ಸ ಗ್ರಾಮದ ಪ್ರಕಾಶ್ ಬಸವ ಪೂಜಾರಿ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ನಗರ ರಸ್ತೆಯ ಪಕ್ಕದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿನ ಬೀಗ ಒಡೆದು ಹುಂಡಿಯಲ್ಲಿದ್ದ ಹಣ ಕಳ್ಳತನ ಮಾಡಿರುವ ಬಗ್ಗೆ ಮಹೇಶ್ ಅವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ > ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ
ಈ ಎರಡೂ ಪ್ರಕರಣಗಳ ತನಿಖೆಯನ್ನು ಕೈಗೊಂಡ ಹೊಸನಗರ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಪಿಎಸ್‌ಐ ಶಂಕರಗೌಡ ಪಾಟೀಲ್ ನೇತೃತ್ವದ ತಂಡವು ಆರೋಪಿಯಾದ ಮೂರ್ತಿ.ವಿ ಅಲಿಯಾಸ್ ಕತ್ತೆಮೂರ್ತಿ (28), ಬೋವಿ ಕಾಲೋನಿ, ಭದ್ರಾವತಿ ನಿವಾಸಿಯನ್ನು ಪತ್ತೆಹಚ್ಚಿ ಬಂಧಿಸಿದೆ. ಆರೋಪಿಯಿಂದ ಕಳ್ಳತನವಾಗಿದ್ದ ಸುಮಾರು 60,000 ಮೌಲ್ಯದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಹಾಗೂ ದೇವಸ್ಥಾನದ ಹುಂಡಿಯಿಂದ ಕಳುವಾಗಿದ್ದ 1,100 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ > ಅಣ್ಣನಿಂದಲೇ ತಮ್ಮನ ಹತ್ಯೆ, ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ














