ಹೊಳೆಹೊನ್ನೂರು: ಗ್ರಾಮಗಳಿಗೆ ಶುದ್ಧ ನೀರು ಪೂರೈಸುವ ಜಲ್ ಜೀವನ್ ಮಿಷನ್ ಪೈಪ್‌ನ 18 ಬಂಡಲ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, 7.92 ಲಕ್ಷ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ನಾಗತಿಬೆಳಗಲು ಗ್ರಾಮದ ರಾಕೇಶ (30) ಬಂಧಿತ ಆರೋಪಿಯಾಗಿದ್ದಾನೆ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್ ಕಾಲಿಗೆ ಗುಂಡೇಟು!
ಎಸ್.ಪಿ. ಸಿ. ನಿಖಿಲ್ ಹಾಗೂ ಎಎಸ್.ಪಿ. ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್.ಪಿ. ಪ್ರಕಾಶ್ ರಾಥೋಡ್ ಮೇಲ್ವಿಚಾರಣೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯ ಪಿಐ ಎಂ. ಶಿವಪ್ರಸಾದ್ ಹಾಗೂ ಸಿಬ್ಬಂದಿಗಳಾದ ಅಣ್ಣಪ್ಪ, ಪ್ರಸನ್ನ, ಪ್ರಕಾಶ ನಾಯ್ಕ, ದೊಡ್ಡೇಶಪ್ಪ ಮತ್ತು ವಿಶ್ವನಾಥ್ ಅವರನ್ನೊಳಗೊಂಡ ತಂಡ ಆರೋಪಿಯ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಇದನ್ನೂ ಓದಿ >ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!














