ಶಿವಮೊಗ್ಗ : ಆಕಸ್ಮಿಕ ಬೆಂಕಿ ತಗುಲಿ ನಡು ರಸ್ತೆಯಲ್ಲಿಯೇ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಶಿಕಾರಿಪುರ ತಾಲೂಕಿನ ಅಂಬಲಿಗೋಳ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್ ಕಾಲಿಗೆ ಗುಂಡೇಟು!
ಶಿಕಾರಿಪುರದಿಂದ-ಆಯನೂರು ಸಮೀಪದ ಹಣಗೆರೆ ಕಟ್ಟೆಗೆ ತೆರಳುತ್ತಿದ್ದ ಕಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನೋಡು ನೋಡುತ್ತಿದ್ದಂತೆ ಸಂಪೂರ್ಣವಾಗಿ ಕಾರನ್ನು ಆವರಿಸಿದೆ. ಸುಮಾರು 15 ನಿಮಿಷಗಳ ಕಾಲ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಇದನ್ನೂ ಓದಿ > ಜಲ್ ಜೀವನ್ ಮಿಷನ್ ಪೈಪ್ ಕಳ್ಳತನ, ಆರೋಪಿ ಬಂಧನ
ಶಿಕಾರಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.














