ಶಿವಮೊಗ್ಗ: ಶಿಕಾರಿಪುರದ ಯಾತ್ರೀ ನಿವಾಸಕ್ಕೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಕಾನೂನುಬಾಹಿರವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ > ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ
ಆರೋಪಿಗಳನ್ನು ಸುನೀಲ್ ನಾಯ್ಕ್ (32) ಸುನೀಲ್ ಟಿ ವಿ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 15,000/- ರೂ ಮೌಲ್ಯದ 658ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ, ಸಾರ್ವಜನಿಕರಿಗೆ ಎಚ್ಚರಿಕೆ ಏನು?
ಯಾತ್ರೀ ನಿವಾಸಕ್ಕೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಯಾರೋ ಇಬ್ಬರು ಕಾನೂನುಬಾಹಿರವಾಗಿ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಶಿಕಾರಿಪುರ ಪೊಲೀಸ್ ಠಾಣೆಯ ಪಿಎಸ್‌ಐ ಶರತ್ ಹೆಚ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














