ತೀರ್ಥಹಳ್ಳಿ: ಬಾಳೆಬೈಲು ಸಮೀಪದ ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ನಿನ್ನೆ (ಭಾನುವಾರ) ನಡೆದಿದೆ.
ಇದನ್ನೂ ಓದಿ > ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!
ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರಿಟ್ಜ್ ಕಾರು ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಡಿಕ್ಕಿ ಸಂಭವಿಸಿದೆ.
ಇದನ್ನೂ ಓದಿ > ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್
ಎರಡೂ ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇನ್ನೋವಾ ಕಾರು ದಾವಣಗೆರೆ ಮೂಲದ್ದು ಹಾಗೂ ರಿಟ್ಜ್ ಕಾರು ಕುರುವಳ್ಳಿ ಗ್ರಾಮಕ್ಕೆ ಸೇರಿದ್ದು ಎಂದು ತಿಳಿದುಬಂದಿದೆ.
ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ > ಶಿವಮೊಗ್ಗ, ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!, ಏನಿದು ಪ್ರಕರಣ?














