• About Us
  • Advertise
  • Privacy & Policy
  • Contact Us
Friday, June 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ

ಉತ್ಪನ್ನ ಆಧಾರಿತ ಭಾರತದ ಕನಸಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಬಲ | ಐಐಟಿ ಧಾರವಾಡದ ಸಂಶೋಧನಾ ಡೀನ್ ಡಾ.ಎಂ.ಎ ಸೋಮಶೇಖರ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 26, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ
Share on FacebookShare on TwitterShare on WhatsApp
ಶಿವಮೊಗ್ಗ: ತಂತ್ರಜ್ಞಾನ ಬದಲಾವಣೆಯ ವೇಗ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೇವಲ ಯಂತ್ರಗಳ ಅಧ್ಯಯನಕ್ಕೆ ಸೀಮಿತವಾಗದೆ, ಉತ್ಪನ್ನ ಆಧಾರಿತ, ಸುಸ್ಥಿರ ಅಭಿವೃದ್ಧಿ ಹಾಗೂ ಸಮಾಜಮುಖಿ ಆವಿಷ್ಕಾರಗಳ ಕೇಂದ್ರಬಿಂದುವಾಗಿ ರೂಪುಗೊಳ್ಳುತ್ತಿದೆ ಎಂದು ಐಐಟಿ ಧಾರವಾಡದ ಸಂಶೋಧನಾ ಡೀನ್ ಡಾ.ಎಂ.ಎ ಸೋಮಶೇಖರ್ ಹೇಳಿದರು.
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಎಲ್.ಅಂಡ್.ಟಿ ಎಜುಟೆಕ್, ಯುನಿಮೆಕ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಫೌಂಡ್ರಿಮ್ಯಾನ್ ಸಂಸ್ಥೆಗಳ ಸಂಯುಕ್ತಾಶಯದಲ್ಲಿ ಗುರುವಾರ ಆಯೋಜಿಸಿದ್ದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿನ ನವೀನ ಪ್ರಗತಿಗಳು ಕುರಿತ ಅಂತರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ >  ಶಿವಮೊಗ್ಗದಲ್ಲಿ ಇಲ್ಲಿವರೆಗೂ ಏನೇನಾಯ್ತು.̧? ಇಲ್ಲಿವೆ ಟಾಪ್‌-5 ಸುದ್ದಿಗಳು
 ಮೆಕ್ಯಾನಿಕಲ್ ಇಂಜಿನಿಯರಿಂಗ್ ಎನ್ನುವುದು ವಸ್ತುಗಳನ್ನು ಹೇಗೆ ಕಾಣಬೇಕು, ದೋಷಗಳನ್ನು ಹೇಗೆ ಗುರುತಿಸಬೇಕು ಮತ್ತು ಅವನ್ನು ಇನ್ನಷ್ಟು ಉತ್ತಮ ಉತ್ಪನ್ನಗಳಾಗಿ ಹೇಗೆ ರೂಪಿಸಬೇಕು ಎಂಬ ಚಿಂತನಾ ಪ್ರಕ್ರಿಯೆಯಾಗಿದೆ. ಮುಂದಿನ ದಿನಗಳಲ್ಲಿ ಯಂತ್ರಗಳು ಪರಸ್ಪರ ಸಂವಹನ ನಡೆಸುವ ಪ್ರಕ್ರಿಯೆ ಹೆಚ್ಚಾಗಲಿದ್ದು, ರೋಬೋಟ್‌ಗಳು ಅನೇಕ ಕಾರ್ಯಗಳನ್ನು ನಿರ್ವಹಿಸಲಿವೆ.
ಆಭರಣ ಕ್ಷೇತ್ರದಲ್ಲಿಯೂ ತ್ರಿಡಿ ಮುದ್ರಣ ತಂತ್ರಜ್ಞಾನ ವೇಗವಾಗಿ ಪ್ರವೇಶಿಸುತ್ತಿದ್ದು, ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಮೂಡುತ್ತಿವೆ. ಅಂತಹ ತಂತ್ರಜ್ಞಾನ ಪರಿಸರದಲ್ಲಿ ಮತ್ತಷ್ಟು ವೇಗ ಪಡೆಯಲು ಸಂಶೋಧನಾರ್ಥಿಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್‌ನ ಮೂಲಭೂತ ತತ್ವಗಳಲ್ಲಿ ದೃಢವಾದ ಕಲಿತು ಮುಂದರ ಸಾಗಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ >  ಶಿವಮೊಗ್ಗ ರಾಗಿಗುಡ್ಡದಲ್ಲಿ ಡ್ರಗ್ಸ್ ಮಾರಾಟ!, ಗ್ರಾಮಾಂತರ ಪೊಲೀಸರ ದಾಳಿ, ಬಂಧನ
ಮುಖ್ಯ ಅತಿಥಿಗಳಾದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಕೃತಕ ಬುದ್ಧಿಮತ್ತೆ ಕುರಿತು ಸಮಾಜದಲ್ಲಿ ಭೀತಿ ಮತ್ತು ಆತಂಕ ಕಂಡುಬರುತ್ತಿದ್ದರೂ, ಬದಲಾವಣೆಯನ್ನು ಸ್ವೀಕರಿಸುವ ಮತ್ತು ಹೆಚ್ಚು ವಿಕಸನಗೊಳ್ಳುವ ಮನೋಭಾವ ಅಗತ್ಯ. ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳು, ಇಂಜಿನಿಯರಿಂಗ್ ಶಿಕ್ಷಣದ ಮೂಲ ಬೇರುಗಳಾಗಿದ್ದು, ಸ್ವಯಂ ಉದ್ಯೋಗ ಸೃಷ್ಟಿಗೆ ಸದಾ ಶಕ್ತಿ ತುಂಬಲಿವೆ.
ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ಜ್ಞಾನ ನಿರಂತರವಾಗಿ ಹರಿತವಾಗಲು ಇಂತಹ ವಿಚಾರ ಸಂಕಿರಣಗಳು ಪ್ರೇರಣೆಯಾಗುತ್ತವೆ. ಸಂಶೋಧನೆ ಎಂಬುದು ಸ್ವಯಂಪ್ರೇರಿತ, ಸತ್ವಭರಿತ ಹಾಗೂ ಸಮಾಜಮುಖಿಯಾಗಿರಬೇಕು ಎಂದು ಹೇಳಿದರು.
ಇದನ್ನೂ ಓದಿ > ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಇಂದು ಬಹುಶಾಖೀಯ ಸ್ವರೂಪ ಪಡೆದುಕೊಂಡಿದ್ದು, ಕೈಗಾರಿಕೆಗಳ ಅವಶ್ಯಕತೆಗಳನ್ನು ಪೂರೈಸಲು ತಂತ್ರಜ್ಞಾನ ಮತ್ತು ಹೊಸ ಆವಿಷ್ಕಾರಗಳೊಂದಿಗೆ ಹೆಜ್ಜೆ ಹಾಕಬೇಕಾಗಿದೆ.
ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಉತ್ಪಾದಕತೆ ಹೆಚ್ಚಿಸಲು ಮೆಕ್ಯಾನಿಕಲ್ ತಂತ್ರಜ್ಞಾನ ಪ್ರಮುಖ ಪಾತ್ರವಹಿಸಬೇಕು. ಸಮಾಜದ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರಗಳನ್ನು ನೀಡುವತ್ತ ಸಂಶೋಧನೆಗಳು ಸಾಗಬೇಕು. ತ್ಯಾಜ್ಯ ಉತ್ಪಾದನೆ ಕಡಿಮೆ ಮಾಡಿ, ಮರುಬಳಕೆ ಆಧಾರಿತ ವಲಯದ ಆರ್ಥಿಕತೆಯ ನಿರ್ಮಾಣವೇ ಭವಿಷ್ಯದ ಬೆಳವಣಿಗೆಯ ದಿಕ್ಕಾಗಬೇಕು ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಈ.ಬಸವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ಇಎಸ್ ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ವಿಚಾರ ಸಂಕಿರಣದ ಸಂಯೋಜಕರಾದ ಡಾ.ಸತ್ಯಪ್ರೇಮ, ಡಾ.ಅಮಿತ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪರಮೇಶ್ವರ.ಎಸ್ ನಿರೂಪಿಸಿದರು. ಇದೇ ವೇಳೆ‌ ವಿಚಾರಸಂಕಿರಣದ ಕಿರುಹೊತ್ತಿಗೆಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು.
Tags: International Symposium at JNNCE CollegeJNNCE Collegekannada newskannada news livelatest newsmalnad newsshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಇಲ್ಲಿವರೆಗೂ ಏನೇನಾಯ್ತು.̧? ಇಲ್ಲಿವೆ ಟಾಪ್‌-5 ಸುದ್ದಿಗಳು

Next Post

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

June 26, 2026
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

June 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026

Copyright © 2026 Yuva Dhwani. Designed by KIPL