ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಲಕ್ಕುಂದದ ಬಳಿ ವ್ಯಕ್ತಿಯೊಬ್ಬರು ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಾಹಿಸಿ ಸಾವುಕಂಡಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಇಂದಿರಾನಗರದ ನಿವಾಸಿ ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > 251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ
ಪತ್ರೋಡೆ ಮಾಡಲು ಎಲೆಗಳನ್ನು ಕೊಯ್ಯಲು ಮರ ಹತ್ತಿದ್ದರು. ಆದರೆ ಮರದ ಮೇಲಿಂದ ಹಾದುಹೋಗಿದ್ದ ವಿದ್ಯುತ್ ತಂತಿಯನ್ನು ಅವರು ಗಮನಿಸಿರಲಿಲ್ಲ ಎನ್ನಲಾಗಿದೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಾಹ ಉಂಟಾಗಿ, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ > ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!
ಮೃತ ಯುವಕನಿಗೆ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಬಂಧು-ಬಳಗದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















