• About Us
  • Advertise
  • Privacy & Policy
  • Contact Us
Saturday, June 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ವಿಶೇಷ

ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ಭಾವೈಕ್ಯತೆ ಸಾರಿದ ಬಂಜಾರ ಸಮುದಾಯ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 27, 2026
in ವಿಶೇಷ, ಶಿಕಾರಿಪುರ
ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!
Share on FacebookShare on TwitterShare on WhatsApp

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಜಾತಿ, ಧರ್ಮಗಳ ಹೆಸರಿನಲ್ಲಿ ಸಮಾಜದಲ್ಲಿ ಗೋಡೆಗಳು ಸೃಷ್ಟಿಯಾಗುತ್ತಿರುವ ನಡುವೆಯೇ, ಶಿವಮೊಗ್ಗ ಜಿಲ್ಲೆಯಲ್ಲಿ ಅಪರೂಪದ ಹಾಗೂ ಹೆಮ್ಮೆಯ ಆಚರಣೆ ಚಾಲ್ತಿಯಲ್ಲಿದೆ. ಒಂದೇ ಒಂದು ಮುಸ್ಲಿಂ ಕುಟುಂಬವೂ ಇಲ್ಲದ ಗ್ರಾಮವೊಂದರಲ್ಲಿ ಇಡೀ ಬಂಜಾರ ಸಮುದಾಯದ ಜನರು ಒಟ್ಟಾಗಿ ಅತ್ಯಂತ ಶ್ರದ್ಧಾಭಕ್ತಿಯಿಂದ ಅದ್ದೂರಿಯಾಗಿ ಮೊಹರಂ ಹಬ್ಬವನ್ನು ಆಚರಿಸುವ ಮೂಲಕ ಸಮಾಜಕ್ಕೆ ಮಾದರಿ ದಾರಿದೀಪವಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ಈ ವಿಶಿಷ್ಟ ಮತ್ತು ಭಾವೈಕ್ಯತೆಯ ಆಚರಣೆ ನಡೆದಿದೆ. ಈ ತಾಂಡಾದಲ್ಲಿ ಸಂಪೂರ್ಣವಾಗಿ ಬಂಜಾರ ಸಮುದಾಯದವರೇ ವಾಸವಾಗಿದ್ದು, ಇಲ್ಲಿ ಯಾವುದೇ ಮುಸ್ಲಿಂ ಮನೆಗಳಿಲ್ಲ. ಆದಾಗ್ಯೂ, ಇಲ್ಲಿನ ಜನರಿಗೆ ಮೊಹರಂ ಹಬ್ಬದ ಮೇಲಿರುವ ಭಕ್ತಿ ಹಾಗೂ ನಂಬಿಕೆ ಮಾತ್ರ ಅನನ್ಯವಾದದ್ದು. ವರ್ಷಂಪ್ರತಿಯಂತೆ ಈ ಬಾರಿಯೂ ಇಡೀ ತಾಂಡಾದ ಜನತೆ ಒಂದಾಗಿ ಹಬ್ಬವನ್ನು ಭರ್ಜರಿಯಾಗಿ ಆಚರಿಸಿದ್ದಾರೆ.

ಇದನ್ನೂ ಓದಿ > 251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

ಮೂರು ದಿನಗಳ ಕಾಲ ಪೂಜೆ

ಶೀರಿಹಳ್ಳಿ ತಾಂಡಾದಲ್ಲಿ ಸತತ ಮೂರು ದಿನಗಳ ಕಾಲ ಮೊಹರಂ ಆಚರಣೆಯ ಸಡಗರ ಮನೆಮಾಡಿತ್ತು. ಬಂಜಾರ ಸಮುದಾಯದ ಹಿರಿಯರು ಹಾಗೂ ಯುವಕರು ಸೇರಿ ಗ್ರಾಮದ ಖಾಜಾ ಬಂಧನ್ ದೇವಸ್ಥಾನದಲ್ಲಿ ಸಕಲ ಸಿದ್ಧತೆಗಳೊಂದಿಗೆ ’ಅಲೈದೇವರನ್ನು’ ಪ್ರತಿಷ್ಠಾಪಿಸಿ, ಮೂರು ದಿನಗಳ ಕಾಲ ನಿಷ್ಠೆಯಿಂದ ಬೆಳಗ್ಗೆ ಮತ್ತು ಸಂಜೆ ವಿಶೇಷ ಪೂಜೆ ಹಾಗೂ ನೈವೇದ್ಯಗಳನ್ನು ಸಲ್ಲಿಸಿದರು.

ಇದನ್ನೂ ಓದಿ >ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಬಂಜಾರ ಸಂಪ್ರದಾಯದ ಗಾಯನ

ಮೆರವಣಿಗೆಯ ಉದ್ದಕ್ಕೂ ಬಂಜಾರ ಸಮುದಾಯದ ಮಹಿಳೆಯರು ಮತ್ತು ಪುರುಷರು ತಮ್ಮದೇ ಆದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ, ಸಾಂಸ್ಕೃತಿಕ ಹಾಡುಗಳು ಹಾಗೂ ಭಜನೆಗಳ ಮೂಲಕ ಅಲೈ ದೇವರಿಗೆ ವಿಶಿಷ್ಟವಾಗಿ ಭಕ್ತಿ ಸಮರ್ಪಿಸಿದರು. ಇದು ಕೇವಲ ಧಾರ್ಮಿಕ ಆಚರಣೆಯಾಗಿರದೆ ಕಲೆಯ ಸಮ್ಮಿಲನವಾಗಿತ್ತು.

ಇದನ್ನೂ ಓದಿ > ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ಕಷ್ಟಗಳನ್ನು ನೀಗಿಸುವ ದೇವರೆಂಬ ನಂಬಿಕೆ

ಹಬ್ಬದ ಪ್ರಮುಖ ಆಕರ್ಷಣೆಯೆಂದರೆ ತಾಂಡಾದ ಭಕ್ತರು ತಮ್ಮ ಜೀವನದ ಕಷ್ಟ-ಕಾರ್ಪಣ್ಯಗಳನ್ನು, ಅನಾರೋಗ್ಯದ ಸಮಸ್ಯೆಗಳನ್ನು ಅಲೈ ದೇವರ ಮುಂದೆ ಪ್ರಾರ್ಥಿಸಿಕೊಂಡು ಹೇಳಿಕೊಳ್ಳುತ್ತಾರೆ. ಇದೇ ವೇಳೆ ದೇವರಿಂದ ’ಹೇಳಿಕೆ’ (ಅಪ್ಪಣೆ ಅಥವಾ ಭವಿಷ್ಯದ ನುಡಿ) ಕೇಳುವ ವಿಶಿಷ್ಟ ಸಂಪ್ರದಾಯವೂ ಇಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಮೂರನೇ ದಿನದಂದು ತಾಂಡಾದ ಬೀದಿ ಬೀದಿಗಳಲ್ಲಿ ಅಲೈ ದೇವರ ಅದ್ದೂರಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ತಡೋ ದೇವರ ಬಳಿ ಹೋಗಿ ಪೂಜೆ ಸಲ್ಲಿಸಲಾಗುತ್ತೆ ನಂತರ, ಮೂರು ದಿನಗಳ ಕಾಲ ಶ್ರದ್ಧೆಯಿಂದ ವ್ರತ ಆಚರಿಸಿ ಧರಿಸಿದ್ದ ’ಅಲೈ ಮಾಲೆ’ಯನ್ನು ಭಕ್ತರು ಕೆರೆ ನೀರಿನಲ್ಲಿ ವಿಸರ್ಜನೆ ಮಾಡಿದರು. ನೀರಲ್ಲಿ ಬಿಟ್ಟು ಪೂಜೆ ಸಲ್ಲಿಸುವುದರೊಂದಿಗೆ ಈ ವರ್ಷದ ಸೌಹಾರ್ದತೆಯ ಮೊಹರಂ ಆಚರಣೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

Tags: A grand Muharram celebration in a town with no Muslims!Banjara community expresses solidaritykannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

Next Post

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

June 27, 2026
ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

June 27, 2026
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

June 27, 2026
ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

June 27, 2026

Copyright © 2026 Yuva Dhwani. Designed by KIPL