ಶಿವಮೊಗ್ಗ : ನಗರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ > ನಂಬರ್ ಪ್ಲೇಟ್ ಇಲ್ಲದ 74 ದ್ವಿಚಕ್ರ ವಾಹನಗಳು ವಶಕ್ಕೆ, ಎಸ್ಪಿ ನಿಖಿಲ್ ಅವರ ಎಚ್ಚರಿಕೆ ಏನು?
ಬಂಧಿತನನ್ನು ಶಾಹೀದ್ ಖಾನ್ (40) ಎಂದು ಗುರುತಿಸಲಾಗಿದೆ. ಈತನಿಂದ 1,52,000 ಮೌಲ್ಯದ 15.21 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟಕ್ಕೆ ಬಳಸಿದ್ದ 40,000 ಮೌಲ್ಯದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ಸಾಗರ ಬಂದ್, ಟ್ರ್ಯಾಕ್ಟರ್‌ಗಳ ರ್‍ಯಾಲಿ, ಹೇಗಿತ್ತು ಬಂದ್?
100 ಅಡಿ ರಸ್ತೆಯಿಂದ ಅಣ್ಣನಗರ ಮಾರ್ಗದಲ್ಲಿ ಇರುವ ತುಂಗಾ ಚಾನೆಲ್ ಏರಿಯಾ ರಸ್ತೆ ಬದಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ದೊಡ್ಡಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















