• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕಸ್ತೂರಬಾ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಅಭಿನಂದನಾ ಕಾರ್ಯಕ್ರಮ

ಪರಿವರ್ತನೆಯ ಯುಗದಲ್ಲಿ ಕ್ರಿಯಾಶೀಲ ಕಲಿಕೆ ಅಧ್ಯಪನ ಅತ್ಯವಶ್ಯಕ | ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 30, 2026
in ಶಿವಮೊಗ್ಗ
ಕಸ್ತೂರಬಾ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಅಭಿನಂದನಾ ಕಾರ್ಯಕ್ರಮ
Share on FacebookShare on TwitterShare on WhatsApp

ಶಿವಮೊಗ್ಗ: ಅಧ್ಯಯನವಿಲ್ಲದ ಅಧ್ಯಾಪನ ಅರ್ಥಹೀನವಾಗಿದ್ದು, ಪರಿವರ್ತನೆಯ ಯುಗದಲ್ಲಿ ಶಿಕ್ಷಕರು ಕ್ರೀಯಾಶೀಲರಾದಾಗ ಮಾತ್ರ ಮಕ್ಕಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಕಸ್ತೂರಬಾ ಬಾಲಿಕಾ ಪ್ರೌಢಶಾಲೆಯ ವತಿಯಿಂದ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ 2026-27 ನೇ ಸಾಲಿನ ವಿದ್ಯಾರ್ಥಿನಿ ಸಂಘದ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ ಸಾಧಿಸಿದ ಅಧ್ಯಾಪಕ ವರ್ಗಕ್ಕೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ > ನಂಬರ್ ಪ್ಲೇಟ್ ಇಲ್ಲದ 74 ದ್ವಿಚಕ್ರ ವಾಹನಗಳು ವಶಕ್ಕೆ, ಎಸ್ಪಿ ನಿಖಿಲ್ ಅವರ ಎಚ್ಚರಿಕೆ ಏನು?

ಪುಸ್ತಕ ಅಭ್ಯಾಸದ ಜೊತೆಗೆ ಮಕ್ಕಳಲ್ಲಿರುವ ಅಂತಃಶಕ್ತಿಯನ್ನು ಗುರುತಿಸಿ ಸಾಧಕರಾಗಿ ಹೊರಹೊಮ್ಮುವಂತೆ ತಯಾರು ಮಾಡುವತ್ತ ಶಿಕ್ಷಕರು ಹೆಚ್ಚು ಕೇಂದ್ರಿಕರಿಸಲಿ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಎನ್‌ಇಎಸ್ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡಿ ಜನಮಾನಸದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸುತ್ತಿದ್ದಾರೆ ಎಂದು ಹೇಳಿದರು.

ಶಿಕ್ಷಣವೆಂದರೆ ಕೇವಲ ಪಾಠಪುಸ್ತಕಕ್ಕೆ ಸೀಮಿತವಾಗಿರದೆ, ಮಕ್ಕಳಲ್ಲಿ ಪ್ರಜಾತಂತ್ರ ವ್ಯವಸ್ಥೆಯ ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವ ಪ್ರಕ್ರಿಯೆಯೂ ಆಗಿದೆ. ಹೃದಯಕ್ಕೆ ನೀಡುವ ಶಿಕ್ಷಣವೇ ನೈಜ ಶಿಕ್ಷಣ. ಆದ್ದರಿಂದ ನೈತಿಕತೆ, ಮಾನವೀಯತೆ ಮತ್ತು ಮೌಲ್ಯಗಳನ್ನು ಒಳಗೊಂಡ ಜ್ಞಾನವನ್ನು ವಿದ್ಯಾರ್ಥಿಗಳಿಗೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜೀವನದಲ್ಲಿ ಎತ್ತರಕ್ಕೆ ಏರುವುದು ಮುಖ್ಯವಾದರೂ, ತಲುಪಿದ ಎತ್ತರವನ್ನು ಕಾಯ್ದುಕೊಳ್ಳುವ ಜಾಗೃತಿ ಇನ್ನಷ್ಟು ಮುಖ್ಯ. ಮಕ್ಕಳು ಕುಟುಂಬ ವ್ಯವಸ್ಥೆಗೆ ಹೆಚ್ಚಿನ ಮೌಲ್ಯ ನೀಡಬೇಕು. ಪೋಷಕರ ಆಸೆ ಆಕಾಂಕ್ಷೆಗಳಿಗೆ ಗೌರವ ನೀಡಿ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ವ್ಯಕ್ತಿಯ ಉನ್ನತಿಯನ್ನು ಅಳೆಯುವುದು ಅವನು ನಡೆದ ದಾರಿಯಿಂದಲ್ಲ, ಅವನ ನಡತೆಯಿಂದ ಎಂಬುದನ್ನು ಅರಿತುಕೊಳ್ಳಬೇಕು. ಹಿಯಾಳಿಸುವ ಜನರಿಗೆ ಬೆರಳು ತೋರಿಸುವುದಕ್ಕಿಂತ, ನಿಮ್ಮ ಬೆಳವಣಿಗೆಯ ಮೂಲಕ ಉತ್ತರ ನೀಡಿ. ಕತ್ತಲು ಮತ್ತು ಅಹಂಕಾರ ಎರಡೂ ಒಂದೇ. ಕತ್ತಲಲ್ಲಿ ಬೆಳಕಿಲ್ಲದಂತೆ, ಅಹಂಕಾರದಲ್ಲಿ ಪ್ರಜ್ಞೆಗೆ ಸ್ಥಾನವಿರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ > ಶಿವಮೊಗ್ಗ, ಎಂಡಿಎಂಎ ಡ್ರಗ್ಸ್ ಮಾರಾಟ!, ದೊಡ್ಡಪೇಟೆ ಪೊಲೀಸರ ದಾಳಿ

ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿ, 72 ವರ್ಷಗಳ ಶೈಕ್ಷಣಿಕ ಶ್ರೇಷ್ಟತೆ ಹೊಂದಿರುವ ಕಸ್ತೂರಬಾ ಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಪಡೆದಿದೆ. ಇಂತಹ ಸಾಧನೆಗಾಗಿ ತಪಸ್ಸಿನಂತೆ ಶ್ರಮಿಸಿದ ಶಿಕ್ಷಕ ಸಮೂಹವನ್ನು ಸಂಸ್ಥೆಯಿಂದ ವಿಶೇಷವಾಗಿ ಅಭಿನಂದಿಸಲಾಗುತ್ತಿದೆ ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ನಿರ್ದೇಶಕರಾದ ಎಚ್.ಸಿ.ಶಿವಕುಮಾರ್, ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್, ವಿದ್ಯಾರ್ಥಿನಿ ಸಂಘದ ಪ್ರಧಾನಿ ಗಾನವಿ, ವಿರೋಧ ಪಕ್ಷದ ನಾಯಕಿ ಕೃತಿಕ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಇದೇ ವೇಳೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹಾಗೂ ವಿಷಯವಾರು ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ, ನೆನಪಿನ ಕಾಣಿಕೆ, ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು.

Tags: kannada news livekasturba-schoollatest newsmalnad newsshimogashivamoga policeshivamoggatalent-award-and-felicitation-program-at-kasturba-schoolರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಶಿವಮೊಗ್ಗ, ಎಂಡಿಎಂಎ ಡ್ರಗ್ಸ್ ಮಾರಾಟ!, ದೊಡ್ಡಪೇಟೆ ಪೊಲೀಸರ ದಾಳಿ

Next Post

250 ಕ್ಕೂ ಹೆಚ್ಚು ಗಾಯಕರಿಂದ ಒಮ್ಮೆಲೆ ನಾಡಗೀತೆ, ಹೇಗಿತ್ತು ಸಾಹಿತ್ಯ ಹುಣ್ಣಿಮೆ ಸಂಭ್ರಮ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
250 ಕ್ಕೂ ಹೆಚ್ಚು ಗಾಯಕರಿಂದ ಒಮ್ಮೆಲೆ ನಾಡಗೀತೆ, ಹೇಗಿತ್ತು ಸಾಹಿತ್ಯ ಹುಣ್ಣಿಮೆ ಸಂಭ್ರಮ?

250 ಕ್ಕೂ ಹೆಚ್ಚು ಗಾಯಕರಿಂದ ಒಮ್ಮೆಲೆ ನಾಡಗೀತೆ, ಹೇಗಿತ್ತು ಸಾಹಿತ್ಯ ಹುಣ್ಣಿಮೆ ಸಂಭ್ರಮ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL