ಶಿವಮೊಗ್ಗ : ಐದು ವರ್ಷಗಳ ಹಿಂದೆ ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್‌ನ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ > ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?
ಮೊಹಮ್ಮದ್ ನೂರುಲ್ಲಾ ಶಿಕ್ಷೆಗೊಳಗಾದ ವ್ಯಕ್ತಿ. 2021ರ ಮೇ 4ರ ಬೆಳಗಿನ ಜಾವ ರಾಗಿಗುಡ್ಡ ಕ್ರಾಸ್‌ನ ಬಳಿ ಸುನಿಲ್ ಎಂಬುವವರು ಮೋಪೆಡ್‌ನಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ ಇಬ್ಬರು ಚಾಕು ತೋರಿಸಿ ಬೆದರಿಕೆ ಹಾಕಿ ₹500 ನಗದು ಹಾಗೂ ₹12,000 ಮೌಲ್ಯದ ಮೊಬೈಲ್ ಫೋನ್ ದರೋಡೆ ಮಾಡಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ > ಶಿವಮೊಗ್ಗ, ಗಾಂಜಾ ಮಾರಾಟ ಇಬ್ಬರ ಬಂಧನ
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ತನಿಖಾಧಿಕಾರಿ ಪಿಐ ಸಂಜೀವ್ ಕುಮಾರ್ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಮೊಹಮ್ಮದ್ ನೂರುಲ್ಲಾ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಕೀಲರಾದ ಮಮತಾ ಬಿ.ಎಸ್ ವಾದ ಮಂಡಿಸಿದ್ದರು.
ಇದನ್ನೂ ಓದಿ > ಜು.05 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೇಲ್ಲಿ?















