ಶಿವಮೊಗ್ಗ : ಹೊಸನಗರ ತಾಲೂಕಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಅಂಗನವಾಡಿಗಳು, ಶಾಲಾ-ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಿ ಹೊಸನಗರ ತಹಶೀಲ್ದಾರ್ ಭರತರಾಜ್ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜುಲೈ 6ರಂದು ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ರಜೆಯಿಂದಾಗಿ ವಿದ್ಯಾರ್ಥಿಗಳಿಗೆ ಉಂಟಾಗುವ ಶೈಕ್ಷಣಿಕ ಹಿನ್ನಡೆ ಸರಿದೂಗಿಸಲು, ಇಂದು ನಡೆಯಬೇಕಾಗಿದ್ದ ಪಾಠ-ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಂದು ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕಾಲೇಜು ಪ್ರಾಂಶುಪಾಲರಿಗೆ ತಹಶೀಲ್ದಾರ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.















