ಶಿವಮೊಗ್ಗ : ಹೊಸನಗರ ಹಾಗೂ ಸಾಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 7, ಮಂಗಳವಾರ) ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಸಾಗರ ಹಾಗೂ ಹೊಸನಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯೊಂದಿಗೆ ಗಾಳಿ ತೀವ್ರವಾಗಿ ಬೀಸುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಾಗರ ತಹಶೀಲ್ದಾರ್ ಪ್ರತಿಮಾ ಹಾಗೂ ಹೊಸನಗರ ತಹಶೀಲ್ದಾರ್ ಭರತ್ ರಾಜ್, ತೀರ್ಥಹಳ್ಳಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ರಜೆ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅನ್ವಯವಾಗಲಿದೆ.
image description













