ಶಿವಮೊಗ್ಗ: ಸಾಗರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮತ್ತು ಮುಂದಿನ ದಿನಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅವರು ಈ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ >ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ
ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಎಲ್ಲಾ ಪದವಿಪೂರ್ವ (ಪಿಯುಸಿ) ಕಾಲೇಜುಗಳು, ಎಲ್ಲಾ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ > ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ
ಈ ದಿನದಂದು ನಡೆಯಬೇಕಾಗಿದ್ದ ತರಗತಿಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸೂಚಿಸಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ಜೋಗದಲ್ಲಿ ಜಲ ವೈಭವ!, ಪ್ರವಾಸಿಗರು ಫಿದಾ















