ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಆಗುಂಬೆಯ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ.
ಇದನ್ನೂ ಓದಿ >ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ
ತೀರ್ಥಹಳ್ಳಿ ಆಗುಂಬೆ ಮಾರ್ಗದ ಗೌರಿಹಕ್ಕಲು ಬಳಿ ಗದ್ದೆಯ ಮೂಲಕ ರಸ್ತೆಗೆ ನೀರು ನುಗ್ಗಿದ್ದು, ವಾಹನ ಸಾವಾರರು ಪರದಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ > ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ
ಆಗುಂಬೆ ವ್ಯಾಪ್ತಿಯಲ್ಲಿ ಹಳ್ಳ ಕೊಳ್ಳಗಳಿಗೆ ಯಾರೂ ಕೂಡ ಇಳಿಯದಂತೆ ಎಚ್ಚರಿಕೆಯನ್ನು ಸಹ ನೀಡಲಾಗಿದೆ.
ಧರೆಗುರುಳಿದ ವಿದ್ಯುತ್ ಕಂಬಗಳು
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮುಂದುವರೆದ ಭಾರೀ ಮಳೆಯಿಂದಾಗಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವ್ಯಾಪಕ ಹಾನಿ ಉಂಟಾಗಿದೆ.
ಕಳೆದ ಎರಡು ದಿನಗಳಿಂದ ಸುರಿದ ಮಳೆಗೆ ಹಲವೆಡೆ ವಿದ್ಯುತ್ ಮೂಲಸೌಕರ್ಯಕ್ಕೆ ಧಕ್ಕೆಯಾಗಿದೆ. ಪರಿಣಾಮವಾಗಿ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಮಳೆಯಲ್ಲಿಯೇ ರಿಪೇರಿ ಕಾರ್ಯಕ್ಕೆ ಮುಂದಾಗಿದ್ದು, ಹೊಸನಗರ ಪಟ್ಟಣದಲ್ಲಿ ಮಳೆಯ ನಡುವೆ ವಿದ್ಯುತ್ ಲೈನ್ ದುರಸ್ತಿ ಕಾರ್ಯ ನಡೆಸುತ್ತಿರುವುದು ಗಮನಾರ್ಹವಾಗಿದೆ.
ವಿದ್ಯುತ್ ಪೂರೈಕೆ ಶೀಘ್ರವಾಗಿ ಮರುಸ್ಥಾಪಿಸಲು ಮೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ.















