ಭದ್ರಾವತಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಲೆಯಿಂದ ಮನೆಗೆ ಮರಳುತ್ತಿದ್ದ ಪುಟ್ಟ ಬಾಲಕ ಸಾವುಕಂಡಿರುವ ಘಟನೆ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ದೊಣಬಘಟ್ಟ ಗ್ರಾಮದ ನಿವಾಸಿ ನಸ್ರುಲ್ಲಾ ಎಂಬುವರ ಪುತ್ರ, ನಾಲ್ಕೂವರೆ ವರ್ಷದ ಎಲ್‌ಕೆಜಿ ವಿದ್ಯಾರ್ಥಿ ಮೊಹಮ್ಮದ್ ಮುನಾವರ್ ತೈಫ್ ಅಪಘಾತದಲ್ಲಿ ಮೃತಪಟ್ಟ ಬಾಲಕ.
ಇದನ್ನೂ ಓದಿ > > ಶಿವಮೊಗ್ಗ, ಟಿಪ್ಪುನಗರದ ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 52,000 ರೂ. ದಂಡ, ಏನಿದು ಪ್ರಕರಣ?
ಮೃತ ಬಾಲಕ ಮುನಾವರ್‌ನನ್ನು ಸೋಮವಾರವಷ್ಟೇ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸೇರಿಸಲಾಗಿತ್ತು. ಶಾಲೆಗೆ ಸೇರಿದ ಎರಡನೇ ದಿನವಾದ ಮಂಗಳವಾರ ತರಗತಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ತೀವ್ರವಾಗಿ ಗಾಯಗೊಂಡ ಬಾಲಕನನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ > > ನೀರು ಕೇಳುವ ನೆಪದಲ್ಲಿ ಸರ ಕದ್ದ ಖದೀಮರು, ಇಬ್ಬರ ಬಂಧನ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














