ಶಿವಮೊಗ್ಗ: ನಗರದ ಸೋಮಿನಕೊಪ್ಪ ರಸ್ತೆಯ ಮೈತ್ರಾ ದೈವಿ ಬಡಾವಣೆ ಎದುರು ನಿನ್ನೆ (ಶುಕ್ರವಾರ) ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ವೇಗವಾಗಿ ಬಂದ ಐ20 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.
ಇದನ್ನೂ ಓದಿ > > ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಮನವಿ
ಡಿಕ್ಕಿಯ ರಭಸಕ್ಕೆ ಡಿವೈಡರ್ ಮೇಲಿದ್ದ ಎರಡು ಕಾಂಕ್ರೀಟ್ ಬ್ಲಾಕ್‌ಗಳು ಹಾಗೂ ಲೈಟ್ ಕಂಬ ಸಂಪೂರ್ಣ ಕಿತ್ತು ಬಿದ್ದಿದ್ದು, ಅಪಘಾತ ಜರುಗುತ್ತಿದ್ದಂತೆ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ > >ಶಿವಮೊಗ್ಗ, ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್ !
ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ















