• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 22, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್‌ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜುಲೈ 24 ಮತ್ತು 25ರಂದು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ತಿಳಿಸಿದರು.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ನವೋದ್ಯಮ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಈ ಹ್ಯಾಕಥಾನ್ ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಹಗಲು-ರಾತ್ರಿ ನಿರಂತರವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ > > ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಮಹಿಳೆಗೆ ಕಾದಿತ್ತು ಆಘಾತ!, ಆಗಿದ್ದೇನು?

ಹ್ಯಾಕಥಾನ್‌ನ ಮೊದಲ ದಿನ ತಂಡಗಳಿಗೆ ಎರಡು ಪ್ರಮುಖ ವಿಭಾಗಗಳಲ್ಲಿ ಸವಾಲಿನ ವಿಷಯಗಳನ್ನು ನೀಡಲಾಗುತ್ತದೆ. ಮೊದಲ ವಿಭಾಗ, ‘ಕೃತಕ ಬುದ್ಧಿಮತ್ತೆ ಮೂಲಕ ವೈದ್ಯಕೀಯ ಚಿತ್ರಗಳ ಗುಣಮಟ್ಟ ಸುಧಾರಣೆ’ (AI for Medical Image Enhancement) ವಿಷಯದಲ್ಲಿ ಎಕ್ಸ್-ರೇ, ಎಂಆರ್‌ಐ, ಸಿಟಿ ಸ್ಕ್ಯಾನ್ ಮೊದಲಾದ ವೈದ್ಯಕೀಯ ಚಿತ್ರಗಳನ್ನು ಕೃತಕ ಬುದ್ಧಿಮತ್ತೆಯ ನೆರವಿನಿಂದ ವಿಶ್ಲೇಷಿಸಿ, ಟ್ಯೂಮರ್ ಪತ್ತೆ, ಅಂಗಾಂಗಗಳ ವಿಭಜನೆ, ದೇಹದ ಅಸಹಜತೆಗಳ ಗುರುತಿಸುವಿಕೆ ಹಾಗೂ ವರ್ಗೀಕರಣದ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಉಪಯುಕ್ತವಾಗುವ ನವೀನ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಸವಾಲು ನೀಡಲಾಗುತ್ತದೆ.

ಎರಡನೇ ವಿಭಾಗ ‘ವಸ್ತು ಗುರುತಿಸುವಿಕೆಗಾಗಿ ಕೃತಕ ಬುದ್ಧಿಮತ್ತೆ’ (AI for Object Recognition) ವಿಷಯದಲ್ಲಿ, ನೈಜ ಪರಿಸರದಲ್ಲಿ ವಸ್ತುಗಳನ್ನು ಪತ್ತೆಹಚ್ಚುವ ಹಾಗೂ ವರ್ಗೀಕರಿಸುವ ಬುದ್ಧಿವಂತ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಸವಾಲನ್ನು ಒಳಗೊಂಡಿದೆ. ಸ್ವಯಂಚಾಲಿತ ವಾಹನಗಳು, ಸ್ಮಾರ್ಟ್ ಸರ್ವೇಲೆನ್ಸ್, ಕೈಗಾರಿಕೆಗಳ ಗುಣಮಟ್ಟ ಪರಿಶೀಲನೆ ಸೇರಿದಂತೆ ವಿವಿಧ ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ ಆಧಾರಿತ ಪರಿಹಾರಗಳನ್ನು ರೂಪಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ > > ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್!, ಕಾರಣವೇನು?

ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳ ರೂಪದಲ್ಲಿ ಒಟ್ಟು ಸುಮಾರು ₹2 ಲಕ್ಷ ನಗದು ಬಹುಮಾನ ವಿತರಿಸಲಾಗುವುದು.

ಜುಲೈ 24ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಖ್ಯಾತ ಉದ್ಯಮಿ ಎಸ್. ರುದ್ರೇಗೌಡ ಉದ್ಘಾಟಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ಹಾಗೂ ಡಾ. ರಾಘವೇಂದ್ರ ಆರ್.ಜೆ. ಉಪಸ್ಥಿತರಿರುವರು.

ಜುಲೈ 25ರಂದು ಶನಿವಾರ ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕರಾದ ಡಾ. ಅರ್ಚನಾ ಮತೂರ್ ಸಮಾರೋಪ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ > >  ಆನಂದಪುರ, ಅಪಘಾತ ತಡೆಗೆ ಪಿಎಸ್‌ಐ ಪ್ರವೀಣ್ ವಿಭಿನ್ನ ಹೆಜ್ಜೆ!

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಘಟನಾ ಸಮಿತಿಯ ಸದಸ್ಯರಾದ  ಡಾ. ರಾಘವೇಂದ್ರ ಆರ್.ಜೆ, ಡಾ. ಪವನ್ ಕುಮಾರ್ ಎಂ.ಪಿ., ಡಾ. ಸಂಜೀವ್ ಕುಂಟೆ, ಅರುಣ್ ಕುಮಾರ್ ಪಿ., ಮನೀಷಾ ಕೆ.ಎಂ. ಹಾಗೂ ವಿಶೃತ ರಾಣಿ ಎಸ್.ಎನ್ ಉಸ್ಥಿತರಿದ್ದರು.

Tags: 'Yugma Tech Fest-2.0' National Level AI Hackathon at JNNCE Collegekannada newskannada news livelatest newsmalnad newsshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ!

Next Post

ಹೊಳೆಹೊನ್ನೂರು, ಡ್ರೋಣ್ ಬಳಸಿ ಪೊಲೀಸ್ ದಾಳಿ, 5 ಜನರ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಳೆಹೊನ್ನೂರು, ಡ್ರೋಣ್ ಬಳಸಿ ಪೊಲೀಸ್ ದಾಳಿ, 5 ಜನರ ಬಂಧನ

ಹೊಳೆಹೊನ್ನೂರು, ಡ್ರೋಣ್ ಬಳಸಿ ಪೊಲೀಸ್ ದಾಳಿ, 5 ಜನರ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026

Copyright © 2026 Yuva Dhwani. Designed by KIPL