• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ಎಐ ಹ್ಯಾಕಥಾನ್ ಉದ್ಘಾಟನೆ

ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಎಐ ಪರಿಹಾರಗಳನ್ನು ರೂಪಿಸಿ | ಎಸ್. ರುದ್ರೇಗೌಡ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 24, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ಎಐ ಹ್ಯಾಕಥಾನ್ ಉದ್ಘಾಟನೆ
Share on FacebookShare on TwitterShare on WhatsApp
ಶಿವಮೊಗ್ಗ: ಯುವ ತಂತ್ರಜ್ಞರು ಸಮಾಜದ ನೈಜ ಸಮಸ್ಯೆಗಳನ್ನು ಗುರುತಿಸಿ, ಜನಸಾಮಾನ್ಯರ ಜೀವನಮಟ್ಟವನ್ನು ಸುಧಾರಿಸುವಂತಹ ನಾವೀನ್ಯ ಎಐ ಆಧಾರಿತ ಪರಿಹಾರಗಳನ್ನು ರೂಪಿಸಿ ಎಂದು ವಿಧಾನಪರಿಷತ್ತಿನ ಮಾಜಿ ಸದಸ್ಯರೂ ಆದ ಉದ್ಯಮಿ ಎಸ್. ರುದ್ರೇಗೌಡ ಕರೆ ನೀಡಿದರು‌‌
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್‌ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಶುಕ್ರವಾರ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್ ಉದ್ಘಾಟಿಸಿ ಮಾತನಾಡಿದರು.
ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭವಿಷ್ಯದ ನವೋದ್ಯಮಿಗಳಾಗಿ, ತಂತ್ರಜ್ಞಾನ ನಾಯಕರಾಗಿ ಬದಲಾಗಬೇಕು. ಅಂತಹ ಬದಲಾವಣೆಗೆ ಹ್ಯಾಕಥಾನ್ ಅದ್ಭುತ ವೇದಿಕೆ. ಭಾರತವು ಸಾಫ್ಟ್‌ವೇರ್‌ ಕ್ಷೇತ್ರದಲ್ಲಿ ಅತ್ಯಂತ ಗಮನಾರ್ಹ ಸಾಧನೆಯನ್ನು ಮಾಡಿದೆ ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ.
ಇದನ್ನೂ ಓದಿ > > ಲಿಂಕ್ ಕ್ಲಿಕ್ ಮಾಡಿ 2.97 ಲಕ್ಷ ಕಳೆದ ಕೊಂಡ ವ್ಯಕ್ತಿ, ಆಗಿದ್ದೇನು?
1970ರ ದಶಕದ ಮಧ್ಯಭಾಗದಲ್ಲಿ ಕಂಪ್ಯೂಟರ್‌ ತಂತ್ರಜ್ಞಾನ ಆರಂಭವಾದ ದಿನಗಳಿಂದ ಹಿಡಿದು ಇಂದಿನ ಕೃತಕ ಬುದ್ಧಿಮತ್ತೆ ಯುಗದವರೆಗೆ ನಮ್ಮ ದೇಶವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಗಳಿಸಿದೆ. ಇಂದು ಎಐ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದರೂ ಪ್ರತಿಭಾವಂತ ಸಾಫ್ಟ್‌ವೇರ್‌ ವೃತ್ತಿಪರರ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದ್ದು, ನಿಮ್ಮಂತಹ ಯುವ ನವೋದ್ಯಮಿಗಳಿಗೆ ಅಪಾರ ಅವಕಾಶಗಳು ತೆರೆದುಕೊಳ್ಳುತ್ತಿವೆ.
ಜಗತ್ತಿನ ಅತಿದೊಡ್ಡ ಗ್ರಾಹಕ ಮಾರುಕಟ್ಟೆಗಳಲ್ಲಿ ಭಾರತವೂ ಒಂದಾಗಿದೆ. ನಮ್ಮ ದೇಶದಲ್ಲಿಯೇ ಅಪಾರ ಅವಕಾಶಗಳಿವೆ. ಆದ್ದರಿಂದ ನಿಮ್ಮ ಜ್ಞಾನ, ಕೌಶಲ್ಯ ಮತ್ತು ಸೃಜನಶೀಲತೆಯನ್ನು ಭಾರತದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬಳಸಿಕೊಳ್ಳಿ. ನಿಮ್ಮಲ್ಲಿ ಹಲವರಿಗೆ ವಿದೇಶಗಳಲ್ಲಿ ಕೆಲಸ ಮಾಡುವ ಅವಕಾಶಗಳು ದೊರೆಯಬಹುದು. ಆದರೆ ನಿಮ್ಮ ಪ್ರತಿಭೆಯಿಂದ ನಮ್ಮ ದೇಶದಲ್ಲಿಯೇ ಮಹತ್ತರ ಬದಲಾವಣೆಗಳನ್ನು ತರಲು ಸಾಧ್ಯ ಎಂಬುದನ್ನು ಎಂದಿಗೂ ಮರೆಯಬೇಡಿ ಎಂದು ಕಿವಿಮಾತು ಹೇಳಿದರು.
ಇದನ್ನೂ ಓದಿ > > ಹೊಳೆಹೊನ್ನೂರು, ಡ್ರೋಣ್ ಬಳಸಿ ಪೊಲೀಸ್ ದಾಳಿ, 5 ಜನರ ಬಂಧನ
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಯುಗ್ಮಾ ಎಂಬ ಶೀರ್ಷಿಕೆಯು ಕೂಡುವಿಕೆಯ ಸಂಕೇತವಾಗಿದೆ. ಪ್ರಾಯೋಗಿಕ ಜ್ಞಾನ ನೀಡುವಂತಹ ಸಾಧಕರ ಒಡನಾಟದಿಂದ ನಮ್ಮಲ್ಲಿ ಮತ್ತಷ್ಟು ಜ್ಞಾನ ವಿಕಸನಗೊಳ್ಳಲಿದೆ. ಎಐ ಎಲ್ಲಾ ರಂಗದಲ್ಲಿ ಅಳವಡಿಸಿಕೊಳ್ಳಲಾಗಿದೆ ಮತ್ತು ಪರಿಣಾಮಕಾರಿ ಫಲಿತಾಂಶ ಪಡೆಯಲಾಗುತ್ತಿದೆ. ಅದರೇ ಎಐ ಮನುಷ್ಯನಿಗೆ ಭಸ್ಮಾಸುರನಂತೆ ಕಾಡದಿರಲಿ. ಆವಿಷ್ಕಾರಗಳು ಬದುಕಿಗೆ ಪೂರಕವಾಗಿರಬೇಕು.
ಈ ನೆಲದ ಋಣ ತೀರಿಸುವತ್ತ ಯುವಸಮೂಹ ಗಮನಹರಿಸಬೇಕಿದೆ. ಪರ ಊರುಗಳಿಗೆ ಅವಕಾಶಗಳಿಗಾಗಿ ಹಾರದೆ, ಸುತ್ತಲಿನ ವಾತಾವರಣ ಬಳಸಿಕೊಂಡು ನಮ್ಮ ಊರಿನಲ್ಲಿಯೇ ಆವಿಷ್ಕಾರಿ ಬದಲಾವಣೆಗಳನ್ನು ನಿರ್ಮಿಸುವ ಕಾರ್ಯವಾಗಬೇಕಿದೆ. ಈ ಹಿನ್ನಲೆಯಲ್ಲಿ ಎಐ ನಂತಹ ತಂತ್ರಜ್ಞಾನಗಳ ಮೂಲಕ ಮತ್ತಷ್ಟು ಯೋಜನೆಗಳು ಅರಳಲಿ ಎಂದು ಹೇಳಿದರು.
ಇದನ್ನೂ ಓದಿ > > ಕುಂಸಿ ರಾಷ್ಟ್ರೀಯ ಪ್ರೌಢಶಾಲೆಗೆ 3 ಬಾರಿ ಶೇ.100% ಫಲಿತಾಂಶ, ಅಧ್ಯಾಪಕ ವೃಂದಕ್ಕೆ ಅಭಿನಂದನೆ
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಹ್ಯಾಕಥಾನ್ ಎನ್ನುವುದು ಕೇವಲ ಒಂದು ಸ್ಪರ್ಧೆಯಲ್ಲ. ಅದು ತರಗತಿಯಲ್ಲಿ ಕಲಿತ ಜ್ಞಾನವನ್ನು ನೈಜ ಜೀವನದ ಸಮಸ್ಯೆಗಳಿಗೆ ಅನ್ವಯಿಸುವ ಸೇತುವೆಯಾಗಿದೆ. ತರಗತಿ ನಿಮಗೆ ಏನು ತಿಳಿಯಬೇಕು ಎಂಬುದನ್ನು ಕಲಿಸಿದರೆ, ಹ್ಯಾಕಥಾನ್ ತಿಳಿದಿರುವ ಜ್ಞಾನವನ್ನು ಸಮಾಜದ ಒಳಿತಿಗಾಗಿ ಹೇಗೆ ಬಳಸಬೇಕು? ಎಂಬ ಮಹತ್ವದ ಪ್ರಶ್ನೆಗೆ ಉತ್ತರ ಹುಡುಕುವ ಅವಕಾಶವನ್ನು ನೀಡುತ್ತದೆ. ನಿಜವಾದ ಕಲಿಕೆ ಅಲ್ಲಿಂದಲೇ ಆರಂಭವಾಗುತ್ತದೆ.
ನೀವು ರೂಪಿಸುವ ಪ್ರತಿಯೊಂದು ಯೋಜನೆಯಲ್ಲಿಯೂ ವಿಸ್ತರಣಾ ಸಾಮರ್ಥ್ಯ, ಸಂಪನ್ಮೂಲ ಹಾಗೂ ಇಂಧನ ದಕ್ಷತೆ, ಸಾಮಾಜಿಕ ಪರಿಣಾಮ ಹೊಂದಿರಬೇಕಾಗಿರುವುದು ಅತ್ಯಂತ ಅವಶ್ಯಕವಾಗಿದೆ. ಸುಸ್ಥಿರ ಅಭಿವೃದ್ಧಿ ಇಂದು ಜಗತ್ತಿನ ಪ್ರಮುಖ ಸವಾಲಾಗಿದೆ. ಎಐ ಅಪಾರ ಅವಕಾಶಗಳನ್ನು ನೀಡಿದರೂ, ಹೆಚ್ಚಿನ ಗಣಕ ಶಕ್ತಿ ಮತ್ತು ವಿದ್ಯುತ್ ಬಳಕೆಯಿಂದ ಕಾರ್ಬನ್ ಹೆಜ್ಜೆಗುರುತನ್ನೂ ಹೆಚ್ಚಿಸುತ್ತದೆ. ಆದ್ದರಿಂದ ಭವಿಷ್ಯದ ಎಂಜಿನಿಯರ್‌ಗಳಾದ ನೀವು ಬುದ್ಧಿವಂತಿಕೆಯ ಜೊತೆಗೆ ಪರಿಸರ ಸ್ನೇಹಿ ಹಾಗೂ ಸಾಮಾಜಿಕ ಜವಾಬ್ದಾರಿಯುತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಇನ್ಫಾರ್ಮೇಷನ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ. ರಾಘವೇಂದ್ರ ಆರ್.ಜೆ, ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಂಯೋಜಕರಾದ ವಿರೇಶ್.ಎಚ್.ಟಿ ಉಪಸ್ಥಿತರಿದ್ದರು. ಸಂಘಟನಾ ಸಮಿತಿಯ ಸದಸ್ಯರಾದ ಡಾ. ಪವನ್ ಕುಮಾರ್ ಎಂ.ಪಿ ಸ್ವಾಗತಿಸಿದರು. ವಿವಿಧ ರಾಜ್ಯಗಳ 150 ಕ್ಕೂ ಹೆಚ್ಚು ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದರು.
Tags: 'Yugma Techfest-2.0' AI Hackathon inaugurated at JNNCE CollegeCRIMEkannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಲಿಂಕ್ ಕ್ಲಿಕ್ ಮಾಡಿ 2.97 ಲಕ್ಷ ಕಳೆದ ಕೊಂಡ ವ್ಯಕ್ತಿ, ಆಗಿದ್ದೇನು?

Next Post

ಭದ್ರಾವತಿಯ ಯುವಕನಿಗೆ 3 ವರ್ಷ ಕಠಿಣ ಜೈಲು!, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ ಯುವಕನಿಗೆ 3 ವರ್ಷ ಕಠಿಣ ಜೈಲು!, ಏನಿದು ಪ್ರಕರಣ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL