• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕಮಲಾ ನೆಹರು ಕಾಲೇಜಿನಲ್ಲಿ ವಿದ್ಯಾರ್ಥಿನಿ ಸಂಘಗಳ ಉದ್ಘಾಟನೆ, ಯಾರೆಲ್ಲಾ ಭಾಗವಹಿಸಿದ್ದರು.?

ತಂತ್ರಜ್ಞಾನ ಬಳಕೆಯಲ್ಲಿ ವಿವೇಕ, ಬದುಕಿನಲ್ಲಿ ಸಂಸ್ಕಾರ ಅಗತ್ಯ: ಎಸ್.ಎನ್. ನಾಗರಾಜ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 25, 2026
in ಶಿವಮೊಗ್ಗ
ಕಮಲಾ ನೆಹರು ಕಾಲೇಜಿನಲ್ಲಿ ವಿದ್ಯಾರ್ಥಿನಿ ಸಂಘಗಳ ಉದ್ಘಾಟನೆ, ಯಾರೆಲ್ಲಾ ಭಾಗವಹಿಸಿದ್ದರು.?
Share on FacebookShare on TwitterShare on WhatsApp
ಶಿವಮೊಗ್ಗ: ಮಾಹಿತಿ ತಂತ್ರಜ್ಞಾನ ಯುಗವೆಂಬ ಆಯುಧದಲ್ಲಿ ಒಳಿತು ಕೆಡಕುಗಳ ತುದಿಯಿದ್ದು, ಬಳಕೆಯಲ್ಲಿ ವಿವೇಕ ಮತ್ತು ಬದುಕಿನಲ್ಲಿ ಸಂಸ್ಕಾರ ಅವಶ್ಯಕ ಸಾಧನವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.
ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವತಿಯಿಂದ ಶನಿವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿ ಸಾಂಸ್ಕೃತಿಕ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡಾ ವಿಭಾಗ, ಯುವ ರೆಡ್ ಕ್ರಾಸ್, ರೇಂಜರ್ಸ್ ಘಟಕ, ಆರೋಗ್ಯ ಪಥ, ಎನ್.ಸಿ. ಸಿ ಘಟಕಗಳ ಉದ್ಘಾಟನಾ ಸಮಾರಂಭವನ್ನು ದೀಪ ಬೇಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ > > ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹದು?
ನಡೆ-ನುಡಿ, ನಡವಳಿಕೆ ಹಾಗೂ ಜೀವನ ಮೌಲ್ಯಗಳನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಪರಿಪೂರ್ಣತೆಯತ್ತ ಸಾಗುವುದೇ ನಿಜವಾದ ಸಂಸ್ಕೃತಿ. ಇಂತಹ ಸೌಜನ್ಯ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಘಟಕಗಳು ಅತ್ಯುತ್ತಮ ವೇದಿಕೆಗಳಾಗಿವೆ.
ಪ್ರಕೃತಿ, ಸಂಸ್ಕೃತಿ ಮತ್ತು ವಿಕೃತಿ ಎಂಬ ಮೂರು ಆಯಾಮಗಳು ಸಮಾಜದಲ್ಲಿ ಸದಾ ಇವೆ. ವಿದ್ಯಾಭ್ಯಾಸ ಮಾಡುತ್ತಿರುವ ಯುವಜನತೆ ಪ್ರಕೃತಿಯಲ್ಲಿ ದೊರೆಯುವ ಕಲ್ಲಿನಂತಿರುತ್ತಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸಕರು ಎಂಬ ಶಿಲ್ಪಿಗಳು ಆ ಕಲ್ಲಿಗೆ ಜ್ಞಾನ, ಮೌಲ್ಯ ಹಾಗೂ ಸಂಸ್ಕೃತಿಯ ರೂಪ ನೀಡುತ್ತಾರೆ. ಈ ಪ್ರಕ್ರಿಯೆಯಲ್ಲಿ ಅನೇಕ ಸವಾಲುಗಳು ಉಳಿಪೆಟ್ಟಿನಂತೆ ಎದುರಾಗುತ್ತವೆ. ಅವುಗಳನ್ನು ಧೈರ್ಯ, ತಾಳ್ಮೆ ಮತ್ತು ದೃಢತೆಯಿಂದ ಎದುರಿಸಿದಾಗ ಮಾತ್ರ ಆ ಕಲ್ಲು ಪೂಜನೀಯ ಶಿಲೆಯಾಗಿ ರೂಪುಗೊಳ್ಳುತ್ತದೆ. ಇಲ್ಲವಾದರೆ ಅದು ವಿಕೃತ ರೂಪ ಪಡೆಯುವ ಅಪಾಯವಿದೆ.
ಇದನ್ನೂ ಓದಿ > >  ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ಎಐ ಹ್ಯಾಕಥಾನ್ ಉದ್ಘಾಟನೆ
ಕಲಿಕೆಯಲ್ಲಿ ದೃಢ ಸಂಕಲ್ಪ ಅತ್ಯಗತ್ಯ. ವಿದ್ಯಾರ್ಥಿಗಳು ತಮ್ಮ ಪೋಷಕರ ತ್ಯಾಗ ಮತ್ತು ಶ್ರಮವನ್ನು ಸದಾ ನೆನಪಿನಲ್ಲಿಟ್ಟುಕೊಂಡು ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಬೇಕು. ವಿಶೇಷವಾಗಿ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದು ಆತ್ಮಗೌರವದಿಂದ ಬದುಕನ್ನು ಕಟ್ಟಿಕೊಳ್ಳಬೇಕು. ಶಿಕ್ಷಣವೇ ವ್ಯಕ್ತಿಗೆ ಆತ್ಮವಿಶ್ವಾಸ, ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಶಕ್ತಿಯನ್ನು ನೀಡುತ್ತದೆ ಎಂದು ಹೇಳಿದರು.
ಜೀವನದ ಪ್ರತಿಯೊಂದು ಹೆಜ್ಜೆಯೂ ಅತ್ಯಂತ ಅಮೂಲ್ಯವಾಗಿದ್ದು, ನಮ್ಮ ಬದುಕಿನ ಗುರಿಯನ್ನು ತೋರಿಸಿದ ಪ್ರತಿಯೊಬ್ಬರನ್ನು ಗುರುಗಳಾಗಿ ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲಿಯೂ ಅಪಾರವಾದ ಸಾಮರ್ಥ್ಯ ಅಡಗಿದೆ. ಆದರೆ ಆ ಶಕ್ತಿಯನ್ನು ಯಾವ ದಿಕ್ಕಿನಲ್ಲಿ ಮತ್ತು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದೇ ನಮ್ಮ ಸಾಧನೆಯನ್ನು ನಿರ್ಧರಿಸುತ್ತದೆ.
– ಬಿ.ವಿ.ಗೀತಾ , ಸದಸ್ಯರು, ಕರ್ನಾಟಕ ಲೋಕಸೇವಾ ಆಯೋಗ
ಇದನ್ನೂ ಓದಿ > >  ಕುಂಸಿ ರಾಷ್ಟ್ರೀಯ ಪ್ರೌಢಶಾಲೆಗೆ 3 ಬಾರಿ ಶೇ.100% ಫಲಿತಾಂಶ, ಅಧ್ಯಾಪಕ ವೃಂದಕ್ಕೆ ಅಭಿನಂದನೆ
ಕುವೆಂಪು ವಿವಿ ದೈಹಿಕ ಶಿಕ್ಷಣ ವಿಭಾಗ ನಿವೃತ್ತ ಸಹ ನಿರ್ದೇಶಕ ಜಿ.ಎಸ್.ನಾಗರಾಜ ಮಾತನಾಡಿ, ಕ್ರೀಡೆ ಎಂಬುದು ಎಲ್ಲಾ ಸಂಕೋಲನೆಯನ್ನು ಮೀರಿ ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಶಕ್ತಿಯಾಗಿದೆ. ಆಧುನಿಕ ಜೀವನಶೈಲಿ, ತಂತ್ರಜ್ಞಾನದ ಮೇಲಿನ ಅತಿಯಾದ ಅವಲಂಬನೆ ಮತ್ತು ದೈಹಿಕ ಚಟುವಟಿಕೆಗಳ ಕೊರತೆಯಿಂದ ಇಂದಿನ ಯುವಪೀಳಿಗೆ ದೈಹಿಕ ಸಾಮರ್ಥ್ಯವನ್ನು ಕ್ರಮೇಣ ಕಳೆದುಕೊಳ್ಳುತ್ತಿದೆ. ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರೂ ದಿನದ ಕೆಲವು ಗಂಟೆಗಳನ್ನಾದರೂ ದೈಹಿಕ ವ್ಯಾಯಾಮ, ಕ್ರೀಡೆ ಅಥವಾ ಯೋಗಕ್ಕೆ ಮೀಸಲಿಡಬೇಕು ಎಂದು ಸಲಹೆ ನೀಡಿದರು.
Tags: kannada newskannada news livelatest newsmalnad newsshimogashivamoggaWho participated in the inauguration of the student unions at Kamala Nehru College?ರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹದು?

Next Post

ವಸತಿ ನಿಲಯದ ವಿದ್ಯಾರ್ಥಿಗಳು ಅಸ್ವಸ್ಥ, ಮೆಗ್ಗಾನ್ ಆಸ್ಪತ್ರೆಗೆ ರವಾನೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವಸತಿ ನಿಲಯದ ವಿದ್ಯಾರ್ಥಿಗಳು ಅಸ್ವಸ್ಥ, ಮೆಗ್ಗಾನ್  ಆಸ್ಪತ್ರೆಗೆ ರವಾನೆ!

ವಸತಿ ನಿಲಯದ ವಿದ್ಯಾರ್ಥಿಗಳು ಅಸ್ವಸ್ಥ, ಮೆಗ್ಗಾನ್ ಆಸ್ಪತ್ರೆಗೆ ರವಾನೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL