ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಎನ್ಆರ್ ಎಸ್ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿ ಶುಕ್ರವಾರ ರಾತ್ರಿ ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡಿದ್ದಾರೆ.
ಆಹಾರ ಸೇವಿಸಿದ ಕೆಲವೇ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ ವಾಂತಿ ಹಾಗೂ ಹೊಟ್ಟೆನೋವಿನಂತಹ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣವೇ ಜಾಗೃತರಾದ ವಸತಿನಿಲಯದ ಸಿಬ್ಬಂದಿ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ತಪಾಸಣೆಗಾಗಿ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ವೈದ್ಯರು ತಕ್ಷಣವೇ ಚಿಕಿತ್ಸೆ ನೀಡಿ ಮಕ್ಕಳ ಆರೋಗ್ಯ ಪರಿಶೀಲನೆ ನಡೆಸಿದರು.
ಇದನ್ನೂ ಓದಿ > > ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹದು?
ಬಳಿಕ ಪೋಷಕರ ಮನವಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಸುಮಾರು 20 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ > > ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ!
ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.














