ಶಿವಮೊಗ್ಗ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ > > ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹದು?
ಕಳೆದ ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸ್ಪರ್ಧಿಸಿ 1999 ರಲ್ಲಿ ಹೆಚ್.ಎಂ.ಚಂದ್ರಶೇಖರಪ್ಪ ಗೆಲುವು ಸಾಧಿಸಿ ಶಿವಮೊಗ್ಗ ನಗರದ ಶಾಸಕರಾಗಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ನಗರಸಭೆ ಅಧ್ಯಕ್ಷರಾಗಿ, ವೀರಶೈವ-ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಹಾಗೂ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ > > ವಸತಿ ನಿಲಯದ ವಿದ್ಯಾರ್ಥಿಗಳು ಅಸ್ವಸ್ಥ, ಮೆಗ್ಗಾನ್ ಆಸ್ಪತ್ರೆಗೆ ರವಾನೆ!
ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ ಸೂಚಿಸಿದೆ.














